Numbers · chapter 35 · verse 34
Numbers 35:34 in Kannada
ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
Aadadarinda neevu vaasamaaduva deshavannu neevu ashuddhamaadabediri; yaakandare naanu adarolage vaasisuttene; kartanaagiruva naane israayel makkala madhyadalli vaasisuttene.
Numbers 35:34 in English
- King James Version (KJV)
- Defile not therefore the land which ye shall inhabit, wherein I dwell: for I the LORD dwell among the children of Israel.
- World English Bible (WEB)
- You shall not defile the land which you inhabit, where I dwell; for I, the LORD, dwell among the children of Israel.’”
- American Standard Version (ASV)
- And thou shalt not defile the land which ye inhabit, in the midst of which I dwell: for I, Jehovah, dwell in the midst of the children of Israel.
- Bible in Basic English (BBE)
- Do not make unclean the land where you are living and in which is my House: for I the Lord am present among the children of Israel.
- Darby Translation (DBY)
- And ye shall not defile the land that ye inhabit, in the midst whereof I dwell; for I am Jehovah who dwell in the midst of the children of Israel.
- Webster's Bible (WBS)
- Defile not therefore the land which ye shall inhabit, in which I dwell: for I the LORD dwell among the children of Israel.
- Young's Literal Translation (YLT)
- and ye defile not the land in which ye are dwelling, in the midst of which I do tabernacle, for I Jehovah do tabernacle in the midst of the sons of Israel.'
Read in context
- 32ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ.
- 33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- 34ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
Cross references
- Numbers 5:3 ಅರಣ್ಯಕಾಂಡ 5:3ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Psalm 135:21 ಕೀರ್ತನೆಗಳು 135:21ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- 2 Corinthians 6:16–17 2 ಕೊರಿಂಥದವರಿಗೆ 6:16–17ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Psalm 132:14 ಕೀರ್ತನೆಗಳು 132:14ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Exodus 25:8 ವಿಮೋಚನಕಾಂಡ 25:8ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
- Leviticus 20:24–26 ಯಾಜಕಕಾಂಡ 20:24–26ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ. ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು. ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ್ದ ಕರ್ತನಾದ ನಾನು ಪರಿಶುದ್ಧನಾಗಿರುವದರಿಂದ ನೀವು ನನಗೆ ಪರಿಶುದ್ಧ ರಾಗಿರಬೇಕು.ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
- Exodus 29:45–46 ವಿಮೋಚನಕಾಂಡ 29:45–46ಇಸ್ರಾಯೇಲ್ ಮಕ್ಕಳ ಮಧ್ಯ ದಲ್ಲಿ ನಾನು ವಾಸಮಾಡಿ ಅವರಿಗೆ ದೇವರಾಗಿರುವೆನು.ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು. ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
- Hosea 9:3 ಹೋಶೇಯ 9:3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
- 1 Kings 6:13 1 ಅರಸುಗಳು 6:13ನನ್ನ ಜನವಾದ ಇಸ್ರಾಯೇಲ್ಯರನ್ನು ಕೈಬಿಡದೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸ ವಾಗಿರುವೆನು ಅಂದನು.
- Leviticus 18:24–25 ಯಾಜಕಕಾಂಡ 18:24–25ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ. ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.