Numbers · chapter 35 · verse 8
Numbers 35:8 in Kannada
ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
Neevu israayel makkala svaastyadinda koduva pattanagalannu hechchaadavara kadeyinda hechchaagi takkollabeku; kadimeyaadavara kadeyinda kadimeyaagi takkollabeku; obbobbanu taanu honduva svaastyakkanusaaravaagi tanna pattana galolaginda leviyarige kodabeku endu helidanu.
Numbers 35:8 in English
- King James Version (KJV)
- And the cities which ye shall give [shall be] of the possession of the children of Israel: from [them that have] many ye shall give many; but from [them that have] few ye shall give few: every one shall give of his cities unto the Levites according to his inheritance which he inheriteth.
- World English Bible (WEB)
- Concerning the cities which you shall give of the possession of the children of Israel, from the many you shall take many, and from the few you shall take few. Everyone according to his inheritance which he inherits shall give some of his cities to the Levites.”
- American Standard Version (ASV)
- And concerning the cities which ye shall give of the possession of the children of Israel, from the many ye shall take many; and from the few ye shall take few: every one according to his inheritance which he inheriteth shall give of his cities unto the Levites.
- Bible in Basic English (BBE)
- And these towns are to be given out of the heritage of the children of Israel, taking the greater number from those who have much, and a smaller number from those who have little: everyone, in the measure of his heritage, is to give of his property to the Levites.
- Darby Translation (DBY)
- And the cities which ye shall give shall be of the possession of the children of Israel: from them that have much ye shall take much, and from them that have little ye shall take little; each one according to his inheritance which he will inherit shall give of his cities to the Levites.
- Webster's Bible (WBS)
- And the cities which ye shall give [shall be] of the possession of the children of Israel: from [them that have] many ye shall give many; but from [them that have] few ye shall give few: every one shall give of his cities to the Levites according to his inheritance which he inheriteth.
- Young's Literal Translation (YLT)
- And the cities which ye give [are] of the possession of the sons of Israel, from the many ye multiply, and from the few ye diminish; each, according to his inheritance which they inherit, doth give of his cities to the Levites.'
Read in context
- 6ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.
- 7ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು.
- 8ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
- 9ಕರ್ತನು ಮೋಶೆಯ ಸಂಗಡ ಮಾತನಾಡಿ--
- 10ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ
Cross references
- Numbers 26:54 ಅರಣ್ಯಕಾಂಡ 26:54ಬಹು ಜನರಿಗೆ ಬಹು ಸ್ವಾಸ್ತ್ಯವನ್ನು ಕೊಡಬೇಕು, ಸ್ವಲ್ಪ ಜನರಿಗೆ ಸ್ವಲ್ಪ ಸ್ವಾಸ್ತ್ಯವನ್ನು ಕೊಡಬೇಕು. ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸ್ವಾಸ್ತ್ಯವನ್ನು ಕೊಡಬೇಕು.
- Numbers 33:54 ಅರಣ್ಯಕಾಂಡ 33:54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
- Exodus 16:18 ವಿಮೋಚನಕಾಂಡ 16:18ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.
- Joshua 21:1–42 ಯೆಹೋಶುವ 21:1–42ಲೇವಿಯರ ಪಿತೃಗಳ ಹಿರಿಯರು ಕಾನಾನ್ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ-- ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು. ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ-- ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು. ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು. ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು. ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು. ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು. ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು. ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು. ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು, ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ; ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ. ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು. ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು. ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ. ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು. ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು.
- Exodus 32:28–29 ವಿಮೋಚನಕಾಂಡ 32:28–29ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು. ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
- 2 Corinthians 8:13–14 2 ಕೊರಿಂಥದವರಿಗೆ 8:13–14ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ. ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
- Deuteronomy 33:8–11 ಧರ್ಮೋಪದೇಶಕಾಂಡ 33:8–11ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು; ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ. ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು. ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
- Genesis 49:7 ಆದಿಕಾಂಡ 49:7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
Original words (Hebrew)
- cities · H5892עִיר ʻîyr
- give · H5414נָתַן nâthan
- possession · H272אֲחֻזָּה ʼăchuzzâh
- children · H1121בֵּן bên
- Israel · H3478יִשְׂרָאֵל Yisrâʼêl
- many · H7227רַב rab
- many · H7235רָבָה râbâh
- few · H4592מְעַט mᵉʻaṭ
- few · H4591מָעַט mâʻaṭ
- one · H376אִישׁ ʼîysh
- give · H5414נָתַן nâthan
- cities · H5892עִיר ʻîyr
- Levites · H3881לֵוִיִּי Lêvîyîy
- according · H6310פֶּה peh
- inheritance · H5159נַחֲלָה nachălâh
- inheriteth · H5157נָחַל nâchal