Numbers · chapter 4 · verse 11
Numbers 4:11 in Kannada
ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
Idallade bangaarada balipeethada mele avaru neeli vastravannu haasi adannu kadalu handiya charmavannu muchchala hodisi adara kolugalannu idabeku.
Numbers 4:11 in English
- King James Version (KJV)
- And upon the golden altar they shall spread a cloth of blue, and cover it with a covering of badgers’ skins, and shall put to the staves thereof:
- World English Bible (WEB)
- “On the golden altar they shall spread a blue cloth, and cover it with a covering of sealskin, and shall put in its poles.
- American Standard Version (ASV)
- And upon the golden altar they shall spread a cloth of blue, and cover it with a covering of sealskin, and shall put in the staves thereof:
- Bible in Basic English (BBE)
- On the gold altar they are to put a blue cloth, covering it with a leather cover; and they are to put its rods in their places.
- Darby Translation (DBY)
- And upon the golden altar they shall spread a cloth of blue, and cover it with a covering of badgers' skin, and shall put its staves [to it].
- Webster's Bible (WBS)
- And upon the golden altar they shall spread a cloth of blue, and cover it with a covering of badgers' skins, and shall put to it its staffs.
- Young's Literal Translation (YLT)
- 'And on the golden altar they spread a garment of blue, and have covered it with a covering of badger skin, and have placed its staves;
Read in context
- 9ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
- 10ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.
- 11ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
- 12ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು.
- 13ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ
Cross references
- Exodus 40:26–27 ವಿಮೋಚನಕಾಂಡ 40:26–27ಚಿನ್ನದ ವೇದಿಯನ್ನು ಸಭೆಯ ಡೇರೆಯಲ್ಲಿ ತೆರೆಯ ಮುಂದೆ ಇಟ್ಟನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
- Exodus 30:1–19 ವಿಮೋಚನಕಾಂಡ 30:1–19ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು. ಅದರ ಉದ್ದ ಒಂದು ಮೊಳ, ಅಗಲ ಒಂದು ಮೊಳ, ಎತ್ತರ ಎರಡು ಮೊಳ ಇದ್ದು ಅದು ಚಚ್ಚೌಕವಾಗಿರಬೇಕು. ಅದಕ್ಕೆ ಕೊಂಬುಗಳನ್ನು ಅದ ರಿಂದಲೇ ಮಾಡಬೇಕು. ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು. ಆ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು. ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು. ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು. ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು. ಆಗ ಕರ್ತನು ಮಾತನಾಡಿ ಮೋಶೆಗೆ-- ನೀನು ಇಸ್ರಾಯೇಲ್ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು. ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು. ಕ್ರಮವಾಗಿ ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನು ಷ್ಯನು ಇಪ್ಪತ್ತು ವರುಷ ಮೊದಲುಗೊಂಡು ಅದಕ್ಕೆ ಮೇಲಾದ ಪ್ರಾಯವುಳ್ಳವರು ಕರ್ತನಿಗೆ ಕಾಣಿಕೆಯನ್ನು ಕೊಡಬೇಕು. ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು. ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು. ಕರ್ತನು ಮೋಶೆಗೆ-- ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು. ಆರೋನನೂ ಅವನ ಕುಮಾರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.
- Exodus 39:38 ವಿಮೋಚನಕಾಂಡ 39:38ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ತೆರೆಯನ್ನು;
- Exodus 37:25–28 ವಿಮೋಚನಕಾಂಡ 37:25–28ಅವನು ಜಾಲೀ ಮರದಿಂದ ಧೂಪಪೀಠವನ್ನು ಮಾಡಿದನು; ಅದು ಒಂದು ಮೊಳ ಉದ್ದ, ಒಂದು ಮೊಳ ಅಗಲವಾಗಿ ಚಚ್ಚೌಕವಾಗಿತ್ತು; ಅದು ಎರಡು ಮೊಳ ಎತ್ತರವಾಗಿತ್ತು. ಅದರ ಕೊಂಬುಗಳು ಸಹ ಜಾಲೀ ಮರದಿಂದಲೇ ಮಾಡಲ್ಪಟ್ಟಿದ್ದವು. ಅವನು ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಅದರ ಕೊಂಬುಗಳನ್ನೂ ಚೊಕ್ಕ ಬಂಗಾರದಿಂದ ಹೊದಿಸಿದನು; ಅದರ ಸುತ್ತಲೂ ಬಂಗಾರದ ಕಿರೀಟ ವನ್ನಿಟ್ಟನು. ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು. ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು.ಅನಂತರ ಅವನು ವೈದ್ಯನ ಪದ್ಧತಿಯ ಪ್ರಕಾರ ಪವಿತ್ರವಾದ ಅಭಿಷೇಕ ತೈಲವನ್ನೂ ಪರಿಮಳ ದ್ರವ್ಯ ದಿಂದ ಶುದ್ಧವಾದ ಧೂಪವನ್ನೂ ತಯಾರಿಸಿದನು.
- Exodus 40:5 ವಿಮೋಚನಕಾಂಡ 40:5ನೀನು ಧೂಪಕ್ಕೋಸ್ಕರ ಮಾಡಿದ ಚಿನ್ನದ ಬಲಿಪೀಠವನ್ನು ಮಂಜೂಷದ ಸಾಕ್ಷಿಯ ಪೆಟ್ಟಿಗೆಗೆ ಎದುರಾಗಿ ಇಟ್ಟು, ಗುಡಾರದ ಬಾಗಿಲಿಗೆ ತೆರೆಯನ್ನು ಹಾಕಬೇಕು.