Numbers · chapter 5 · verse 2
Numbers 5:2 in Kannada
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
Kushthavi ruvavarellarannoo mehavullavarellarannoo henadinda ashuddhavaadavarellarannoo paaleyadolaginda kalu hisabekendu israayel makkalige aajnyaapisu.
Numbers 5:2 in English
- King James Version (KJV)
- Command the children of Israel, that they put out of the camp every leper, and every one that hath an issue, and whosoever is defiled by the dead:
- World English Bible (WEB)
- “Command the children of Israel that they put out of the camp every leper, everyone who has a discharge, and whoever is unclean by a corpse.
- American Standard Version (ASV)
- Command the children of Israel, that they put out of the camp every leper, and every one that hath an issue, and whosoever is unclean by the dead:
- Bible in Basic English (BBE)
- Give orders to the children of Israel to put outside the tent-circle every leper, and anyone who has any sort of flow from his body, and anyone who is unclean from the touch of the dead;
- Darby Translation (DBY)
- Command the children of Israel, that they put out of the camp every leper, and every one that hath an issue, and whosoever is defiled by a dead person:
- Webster's Bible (WBS)
- Command the children of Israel, that they put out of the camp every leper, and every one that hath an issue, and whoever is defiled by the dead:
- Young's Literal Translation (YLT)
- 'Command the sons of Israel, and they send out of the camp every leper, and every one with an issue, and every one defiled by a body;
Read in context
- 1ಇದಲ್ಲದೆ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
- 3ಗಂಡಸನ್ನಾಗಲಿ ಹೆಂಗಸನ್ನಾಗಲಿ ನೀವು ಹೊರಗೆ ಕಳುಹಿಸಬೇಕು. ನಾನು ಅವರ ಮಧ್ಯದಲ್ಲಿ ವಾಸ ಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಹೊರಗೆ ಕಳುಹಿಸಬೇಕು ಎಂಬದೇ.
- 4ಆಗ ಇಸ್ರಾಯೇಲ್ ಮಕ್ಕಳು ಹಾಗೆ ಮಾಡಿ ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಕರ್ತನು ಮೋಶೆಗೆ ಹೇಳಿದ ಹಾಗೆ ಇಸ್ರಾಯೇಲ್ ಮಕ್ಕಳು ಮಾಡಿದರು.
Cross references
- Leviticus 13:46 ಯಾಜಕಕಾಂಡ 13:46ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- Leviticus 21:1 ಯಾಜಕಕಾಂಡ 21:1ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
- Numbers 9:6–10 ಅರಣ್ಯಕಾಂಡ 9:6–10ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು. ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು. ಮೋಶೆ ಅವ ರಿಗೆ--ಸುಮ್ಮನೆ ನಿಲ್ಲಿರಿ, ಕರ್ತನು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುವನೋ ನಾನು ವಿಚಾರಿಸುತ್ತೇನೆ ಅಂದನು. ಕರ್ತನು ಮೋಶೆ ಸಂಗಡ ಮಾತನಾಡಿ ಅವನಿಗೆ ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
- Numbers 12:14 ಅರಣ್ಯಕಾಂಡ 12:14ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
- Numbers 31:19 ಅರಣ್ಯಕಾಂಡ 31:19ಯಾವನಾದರೂ ಒಬ್ಬ ವ್ಯಕ್ತಿಯನ್ನು ಕೊಂದವನು, ಸತ್ತವನನ್ನು ಮುಟ್ಟಿದವನು ಏಳು ದಿವಸದ ವರೆಗೆ ಪಾಳೆಯದ ಹೊರಗೆ ಇರಬೇಕು. ಮೂರನೇ ದಿನದಲ್ಲಿ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಮತ್ತು ನಿಮ್ಮ ಸೆರೆಯವರನ್ನು ಶುದ್ಧಿ ಮಾಡಿಕೊಳ್ಳಿರಿ.
- Leviticus 15:2–27 ಯಾಜಕಕಾಂಡ 15:2–27ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು. ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು. ಸ್ರಾವವಿರು ವವನು ಮಲಗುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾದದ್ದು; ಅವನು ಕೂತುಕೊಳ್ಳುವ ಪ್ರತಿ ಯೊಂದು ವಸ್ತುವು ಅಶುದ್ಧವಾಗಿರುವದು. ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಇದಲ್ಲದೆ ಸ್ರಾವವಿರುವವನು ಕೂತುಕೊಂಡ ಯಾವುದೇ ವಸ್ತು ವಿನ ಮೇಲೆ ಕೂತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು. ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು. ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಸ್ರಾವವುಳ್ಳವನು ಏರಿಕೂತುಕೊಂಡಿದ್ದ ತಡಿಯು ಅಶುದ್ಧವಾಗಿರುವದು. ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು. ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು, ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು. ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು. ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು. ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು. ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು. ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ ವೀರ್ಯವನ್ನು ಬಿಟ್ಟಿದ್ದರೆ ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧರಾಗಿರಬೇಕು. ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತಸ್ರಾವವಿದ್ದರೆ ಅವಳು ಏಳು ದಿವಸಗಳ ವರೆಗೆ ಪ್ರತ್ಯೇಕಿಸಲ್ಪಡಬೇಕು. ಅವಳನ್ನು ಯಾವನಾದರೂ ಮುಟ್ಟಿದರೆ ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳು ಕೂತುಕೊ ಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರಬೇಕು. ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು. ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು. ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು. ಯಾವನಾದರೂ ಅವಳೊಂದಿಗೆ ಮಲಗಿದರೆ ಅವಳ ಸಾರವು (ಹೊಲೆ) ಅವನಿಗೆ ತಗಲಿದರೆ ಅವನು ಏಳು ದಿವಸ ಅಶುದ್ಧನಾಗಿರಬೇಕು; ಅವನು ಮಲಗಿ ಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವದು. ಇದಲ್ಲದೆ ಹೆಂಗಸಿಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿ ಯುತ್ತಿದ್ದರೆ ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನ ಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು; ಅವಳು ಅಶುದ್ಧಳಾಗಿರುವಳು. ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯೂ ಅವಳ ಮುಟ್ಟಿನ ಹಾಸಿಗೆಯಂತಿರಬೇಕು; ಅವಳು ಕೂತುಕೊಳ್ಳುವದೆಲ್ಲವೂ ಅವಳ ಪ್ರತ್ಯೇಕದ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವದು. ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
- 2 Kings 7:3 2 ಅರಸುಗಳು 7:3ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?
- Deuteronomy 24:8–9 ಧರ್ಮೋಪದೇಶಕಾಂಡ 24:8–9ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು; ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.
- Numbers 19:11–16 ಅರಣ್ಯಕಾಂಡ 19:11–16ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು. ಅವನು ಇದ ರಿಂದ ಮೂರನೇ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿ ಕೊಂಡು ಏಳನೇ ದಿವಸದಲ್ಲಿ ಶುದ್ಧನಾಗಬೇಕು; ಆದರೆ ಅವನು ಮೂರನೇ ದಿವಸದಲ್ಲಿ ತನ್ನನ್ನು ಶುದ್ಧಮಾಡಿ ಕೊಳ್ಳದಿದ್ದರೆ ಏಳನೇ ದಿವಸದಲ್ಲಿ ಶುದ್ಧನಾಗಲಾರನು. ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ. ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು. ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರಬೇಕು. ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.