Numbers · chapter 6 · verse 10
Numbers 6:10 in Kannada
ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
Entaneya divasadalli avanu yaajakana balige sabheya gudaarada baagalige eradu belavakki galannu illave eradu paarivaalada marigalannu tarabeku.
Numbers 6:10 in English
- King James Version (KJV)
- And on the eighth day he shall bring two turtles, or two young pigeons, to the priest, to the door of the tabernacle of the congregation:
- World English Bible (WEB)
- On the eighth day he shall bring two turtledoves or two young pigeons to the priest, to the door of the Tent of Meeting.
- American Standard Version (ASV)
- And on the eighth day he shall bring two turtle-doves, or two young pigeons, to the priest, to the door of the tent of meeting:
- Bible in Basic English (BBE)
- And on the eighth day let him take to the priest, at the door of the Tent of meeting, two doves or two young pigeons;
- Darby Translation (DBY)
- And on the eighth day he shall bring two turtle-doves, or two young pigeons, to the priest, at the entrance of the tent of meeting.
- Webster's Bible (WBS)
- And on the eighth day he shall bring two turtles, or two young pigeons, to the priest, to the door of the tabernacle of the congregation:
- Young's Literal Translation (YLT)
- and on the eighth day he bringeth in two turtle-doves or two young pigeons unto the priest, unto the opening of the tent of meeting,
Read in context
- 8ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ.
- 9ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.
- 10ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
- 11ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.
- 12ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
Cross references
- Leviticus 1:14 ಯಾಜಕಕಾಂಡ 1:14ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು.
- Leviticus 15:29 ಯಾಜಕಕಾಂಡ 15:29ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಿಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರ ಬೇಕು.
- Leviticus 15:14 ಯಾಜಕಕಾಂಡ 15:14ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
- Leviticus 14:31 ಯಾಜಕಕಾಂಡ 14:31ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು.
- Leviticus 14:22–23 ಯಾಜಕಕಾಂಡ 14:22–23ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು. ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.
- Leviticus 9:1–21 ಯಾಜಕಕಾಂಡ 9:1–21ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು; ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು. ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು. ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು. ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು. ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು. ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು. ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು. ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು. ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು. ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು. ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು. ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು. ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು. ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು. ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು. ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು. ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು. ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
- Leviticus 5:7–10 ಯಾಜಕಕಾಂಡ 5:7–10ಅವನು ಒಂದು ಕುರಿಮರಿಯನ್ನು ತರುವದಕ್ಕೆ ಅಶಕ್ತನಾಗಿದ್ದರೆ ತಾನು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿ ಗಳನ್ನಾಗಲಿ ಕರ್ತನಿಗೆ ತರಬೇಕು; ಒಂದನ್ನು ಪಾಪದ ಬಲಿಗಾಗಿ ಮತ್ತೊಂದನ್ನು ದಹನಬಲಿಗಾಗಿ ತರಬೇಕು. ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಪಾಪದ ಬಲಿಗೆ ತಂದಿರುವದನ್ನು ಮೊದಲು ಸಮರ್ಪಿಸಿ ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು, ಅದನ್ನು ವಿಭಾಗಿಸಬಾರದು. ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ. ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- John 2:1–2 ಯೋಹಾನನು 2:1–2ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು. ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು.
- Romans 4:25 ರೋಮಾಪುರದವರಿಗೆ 4:25ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- Leviticus 12:6 ಯಾಜಕಕಾಂಡ 12:6ಮಗನಿಗಾಗಿ ಮಗಳಿಗಾಗಿ ಅವಳ ಶುದ್ಧೀಕರಣದ ದಿನಗಳು ಪೂರ್ತಿಯಾದರೆ ಅವಳು ದಹನಬಲಿಗಾಗಿ ಮೊದಲನೇ ವರುಷದ ಕುರಿಮರಿಯನ್ನೂ ಪಾಪದ ಬಲಿಗಾಗಿ ಪಾರಿವಾಳದ ಮರಿಯನ್ನೂ ಒಂದು ಬೆಳವ ವನ್ನೂ ಸಭೆಯ ಗುಡಾರದ ಬಾಗಲಲ್ಲಿ ಯಾಜಕನ ಬಳಿಗೆ ತರಬೇಕು.
Original words (Hebrew)
- eighth · H8066שְׁמִינִי shᵉmîynîy
- day · H3117יוֹם yôwm
- bring · H935בּוֹא bôwʼ
- two · H8147שְׁנַיִם shᵉnayim
- turtles · H8449תּוֹר tôwr
- two · H8147שְׁנַיִם shᵉnayim
- young · H1121בֵּן bên
- pigeons · H3123יוֹנָה yôwnâh
- priest · H3548כֹּהֵן kôhên
- door · H6607פֶּתַח pethach
- tabernacle · H168אֹהֶל ʼôhel
- congregation · H4150מוֹעֵד môwʻêd