Numbers · chapter 7 · verse 1
Numbers 7:1 in Kannada
ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
Mosheyu gudaaravannu nillisiabhishekisi parishuddha maadida dinadalli vastugalannoo balipeethavannoo adara ellaa vastu galannoo abhishekisi parishuddhamaadida mele aadaddenandare--
Numbers 7:1 in English
- King James Version (KJV)
- And it came to pass on the day that Moses had fully set up the tabernacle, and had anointed it, and sanctified it, and all the instruments thereof, both the altar and all the vessels thereof, and had anointed them, and sanctified them;
- World English Bible (WEB)
- On the day that Moses had finished setting up the tabernacle, and had anointed it and sanctified it with all its furniture, and the altar with all its vessels, and had anointed and sanctified them;
- American Standard Version (ASV)
- And it came to pass on the day that Moses had made an end of setting up the tabernacle, and had anointed it and sanctified it, and all the furniture thereof, and the altar and all the vessels thereof, and had anointed them and sanctified them;
- Bible in Basic English (BBE)
- And when Moses had put up the House completely, and had put oil on it and made it holy, with all the things in it, and had made the altar and all its vessels holy with oil;
- Darby Translation (DBY)
- And it came to pass on the day that Moses had completed the setting up of the tabernacle, and had anointed it, and hallowed it, and all the furniture thereof, and the altar and all its utensils, and had anointed them, and hallowed them,
- Webster's Bible (WBS)
- And it came to pass on the day that Moses had fully set up the tabernacle, and had anointed it, and sanctified it, and all its instruments, both the altar and all its vessels, and had anointed them, and sanctified them;
- Young's Literal Translation (YLT)
- And it cometh to pass on the day of Moses' finishing setting up the tabernacle, that he anointeth it, and sanctifieth it, and all its vessels, and the altar, and all its vessels, and he anointeth them, and sanctifieth them,
Read in context
- 1ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
- 2ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.
- 3ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.
Cross references
- Leviticus 8:10–11 ಯಾಜಕಕಾಂಡ 8:10–11ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು. ಅವನು ಅದರಿಂದ ಯಜ್ಞವೇದಿಯ ಮೇಲೆ ಏಳು ಸಾರಿ ಚಿಮುಕಿಸಿ ಯಜ್ಞ ವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಗಂಗಾಳ ವನ್ನೂ ಪೀಠವನ್ನೂ ಅಭಿಷೇಕಿಸಿ ಅವುಗಳನ್ನು ಪವಿತ್ರ ಮಾಡಿದನು.
- Numbers 7:84 ಅರಣ್ಯಕಾಂಡ 7:84ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.
- Matthew 23:19 ಮತ್ತಾಯನು 23:19ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
- 1 Kings 8:64 1 ಅರಸುಗಳು 8:64ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
- Exodus 30:23–30 ವಿಮೋಚನಕಾಂಡ 30:23–30ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು, ಐದುನೂರು ಶೆಕೆಲ್ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು, ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
- Numbers 7:88 ಅರಣ್ಯಕಾಂಡ 7:88ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
- Exodus 40:9–10 ವಿಮೋಚನಕಾಂಡ 40:9–10ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು. ದಹನಬಲಿಪೀಠವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ನೀನು ಅಭಿಷೇಕಿಸಿ ಬಲಿಪೀಠವನ್ನು ಪವಿತ್ರ ಮಾಡು; ಆಗ ಅದು ಅತೀ ಪರಿಶುದ್ಧವಾದ ಬಲಿಪೀಠ ವಾಗುವದು.
- Leviticus 9:1–24 ಯಾಜಕಕಾಂಡ 9:1–24ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು; ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು. ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು. ಕರ್ತನ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಳಿಗಾಗಿ ಹೋರಿಯನ್ನೂ ಟಗರನ್ನೂ ಸಹ ತೆಗೆದುಕೊಳ್ಳಬೇಕು; ಆಹಾರದ ಅರ್ಪಣೆಯು ಎಣ್ಣೆಯೊಂದಿಗೆ ಬೆರೆತಿರಬೇಕು; ಈ ದಿನವೇ ಕರ್ತನು ನಿಮಗೆ ಕಾಣಿಸಿಕೊಳ್ಳುವನು. ಮೋಶೆಯು ಆಜ್ಞಾಪಿಸಿದವುಗಳನ್ನು ಅವರು ಸಭೆಯ ಗುಡಾರದ ಮುಂದೆ ತಂದರು; ಸಭೆಯೆಲ್ಲವೂ ಹತ್ತಿರ ಬಂದು ಕರ್ತನ ಮುಂದೆ ನಿಂತಿತು. ಆಗ ಮೋಶೆಯು--ಕರ್ತನು ಆಜ್ಞಾಪಿಸಿದ್ದು ಇದೇ, ನೀವು ಇದನ್ನು ಮಾಡಿರಿ; ಕರ್ತನ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವದು ಅಂದನು. ಮೋಶೆಯು ಆರೋನನಿಗೆ--ಯಜ್ಞವೇದಿಯ ಹತ್ತಿರಕ್ಕೆ ಹೋಗಿ ಕರ್ತನು ಆಜ್ಞಾಪಿಸಿದಂತೆಯೇ ನಿನ್ನ ಪಾಪದಬಲಿಯನ್ನೂ ದಹನಬಲಿಯನ್ನೂ ಅರ್ಪಿಸಿ, ನಿನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು; ಜನರ ಸಮರ್ಪಣೆಗಳನ್ನು ಸಮರ್ಪಿಸಿ ಅವರಿ ಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು ಅಂದನು. ಆದದರಿಂದ ಆರೋನನು ಯಜ್ಞವೇದಿಯ ಕಡೆಗೆ ಹೋಗಿ ತನಗಾಗಿ ಪಾಪದ ಬಲಿಯ ಕರುವನ್ನು ವಧಿಸಿದನು. ಆಗ ಆರೋನನ ಕುಮಾರರು ಅವನ ಬಳಿಗೆ ರಕ್ತವನ್ನು ತಂದರು; ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ಅದನ್ನು ಯಜ್ಞವೇದಿಯ ಕೊಂಬು ಗಳಿಗೆ ಹಚ್ಚಿದನು; ಉಳಿದ ರಕ್ತವನ್ನು ಯಜ್ಞವೇದಿಯ ಅಡಿಯಲ್ಲಿ ಹೊಯ್ದನು. ಆದರೆ ಪಾಪದ ಬಲಿಯ ಕೊಬ್ಬು, ಮೂತ್ರಜನಕಾಂಗಗಳು ಕಲಿಜದ ಮೇಲಿನ ಪೊರೆ ಇವುಗಳನ್ನು ಕರ್ತನು ಮೋಶೆಗೆ ಆಜ್ಞಾಪಿಸಿ ದ್ದಂತೆಯೇ ಅವನು ಯಜ್ಞವೇದಿಯ ಮೇಲೆ ಸುಟ್ಟನು. ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು. ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು. ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು. ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು. ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು. ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು. ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು. ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು. ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು. ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು. ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು. ಮೋಶೆಯೂ ಆರೋನನೂ ಸಭೆಯ ಗುಡಾರದ ಒಳಗೆ ಹೋಗಿ ಹೊರಗೆ ಬಂದು ಜನರನ್ನು ಆಶೀರ್ವ ದಿಸಿದರು; ಆಗ ಕರ್ತನ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು. ಆಗ ಅಲ್ಲಿ ಕರ್ತನ ಸನ್ನಿಧಿಯಿಂದ ಬೆಂಕಿಯು ಬಂದು ಯಜ್ಞವೇದಿಯ ಮೇಲಿದ್ದ ದಹನ ಬಲಿಯನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿ ಆರ್ಭಟಿಸಿ ಅಡ್ಡಬಿದ್ದರು.
- Exodus 13:2 ವಿಮೋಚನಕಾಂಡ 13:2ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
- Exodus 40:17–19 ವಿಮೋಚನಕಾಂಡ 40:17–19ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು. ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ ಅದರ ಕಾಲುಗಳನ್ನು ಬಿಗಿದು ಅದರ ಹಲಗೆಗಳನ್ನು ಇರಿಸಿ ಅಗುಳಿಗಳನ್ನು ಹಾಕಿ ಅದರ ಸ್ತಂಭಗಳನ್ನು ನಿಲ್ಲಿಸಿದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
- Genesis 2:3 ಆದಿಕಾಂಡ 2:3ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
Original words (Hebrew)
- day · H3117יוֹם yôwm
- Moses · H4872מֹשֶׁה Môsheh
- fully · H3615כָּלָה kâlâh
- up · H6965קוּם qûwm
- tabernacle · H4908מִשְׁכָּן mishkân
- anointed · H4886מָשַׁח mâshach
- sanctified · H6942קָדַשׁ qâdash
- instruments · H3627כְּלִי kᵉlîy
- altar · H4196מִזְבֵּחַ mizbêach
- vessels · H3627כְּלִי kᵉlîy
- anointed · H4886מָשַׁח mâshach
- sanctified · H6942קָדַשׁ qâdash