Numbers · chapter 7 · verse 14
Numbers 7:14 in Kannada
ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
Dhoopadinda tumbidda hattu shekelinashtu tookada bangaarada ondu chamacha,
Numbers 7:14 in English
- King James Version (KJV)
- One spoon of ten [shekels] of gold, full of incense:
- World English Bible (WEB)
- one golden ladle of ten shekels, full of incense;
- American Standard Version (ASV)
- one golden spoon of ten [shekels], full of incense;
- Bible in Basic English (BBE)
- One gold spoon of ten shekels, full of spice for burning;
- Darby Translation (DBY)
- one cup of ten [shekels] of gold, full of incense;
- Webster's Bible (WBS)
- One spoon of ten [shekels] of gold, full of incense:
- Young's Literal Translation (YLT)
- one golden spoon of ten [shekels], full of perfume;
Read in context
- 12ಮೊದಲನೇ ದಿವಸದಲ್ಲಿ ತನ್ನ ಅರ್ಪಣೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅವ್ಮೆಾನಾ ದಾಬನ ಮಗನಾದ ನಹಶೋನನು.
- 13ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 14ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 15ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 16ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
Cross references
- Numbers 4:7 ಅರಣ್ಯಕಾಂಡ 4:7ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.
- 1 Kings 7:50 1 ಅರಸುಗಳು 7:50ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- Exodus 37:16 ವಿಮೋಚನಕಾಂಡ 37:16ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
- 2 Kings 25:14–15 2 ಅರಸುಗಳು 25:14–15ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು. ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು.
- 2 Chronicles 4:22 2 ಪೂರ್ವಕಾಲವೃತ್ತಾಂತ 4:22ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
- Exodus 30:34–38 ವಿಮೋಚನಕಾಂಡ 30:34–38ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ. ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು. ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ. ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು. ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
- 2 Chronicles 24:14 2 ಪೂರ್ವಕಾಲವೃತ್ತಾಂತ 24:14ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- Exodus 30:7–8 ವಿಮೋಚನಕಾಂಡ 30:7–8ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
- Exodus 35:8 ವಿಮೋಚನಕಾಂಡ 35:8ದೀಪಕ್ಕೋಸ್ಕರ ಎಣ್ಣೆ, ಅಭಿಷೇಕಿಸುವ ತೈಲಕ್ಕೋಸ್ಕರ ಮತ್ತು ಪರಿಮಳ ಧೂಪಕ್ಕೋಸ್ಕರ ಸುಗಂಧತೈಲ,