Numbers · chapter 7 · verse 15
Numbers 7:15 in Kannada
ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
Dahanabaligaagi ondu ele hori, ondu tagaru, modalane varushada ondu kurimari.
Numbers 7:15 in English
- King James Version (KJV)
- One young bullock, one ram, one lamb of the first year, for a burnt offering:
- World English Bible (WEB)
- one young bull, one ram, one male lamb a year old, for a burnt offering;
- American Standard Version (ASV)
- one young bullock, one ram, one he-lamb a year old, for a burnt-offering;
- Bible in Basic English (BBE)
- One young ox, one male sheep, one he-lamb of the first year, for a burned offering;
- Darby Translation (DBY)
- one young bullock, one ram, one yearling lamb, for a burnt-offering;
- Webster's Bible (WBS)
- One young bullock, one ram, one lamb of the first year, for a burnt-offering:
- Young's Literal Translation (YLT)
- one bullock, a son of the herd, one ram, one lamb, a son of a year, for a burnt-offering;
Read in context
- 13ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- 14ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ,
- 15ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.
- 16ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ
- 17ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾನಾ ದಾಬನ ಮಗನಾದ ನಹಶೋನನ ಅರ್ಪಣೆಯು.
Cross references
- Romans 8:34 ರೋಮಾಪುರದವರಿಗೆ 8:34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- Romans 10:4 ರೋಮಾಪುರದವರಿಗೆ 10:4ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
- Numbers 28:1–29 ಅರಣ್ಯಕಾಂಡ 28:1–29ಕರ್ತನು ಮೋಶೆಯ ಸಂಗಡ ಮಾತ ನಾಡಿ-- ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Romans 5:6–11 ರೋಮಾಪುರದವರಿಗೆ 5:6–11ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ. ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ. ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ. ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
- 1 Timothy 2:6 1 ತಿಮೊಥೆಯನಿಗೆ 2:6ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
- Isaiah 53:4 ಯೆಶಾಯ 53:4ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
- John 17:19 ಯೋಹಾನನು 17:19ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.
- Hebrews 2:10 ಇಬ್ರಿಯರಿಗೆ 2:10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- Romans 3:24–26 ರೋಮಾಪುರದವರಿಗೆ 3:24–26ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು. ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.