Numbers · chapter 7 · verse 5
Numbers 7:5 in Kannada
ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು.
Avugalannu avarinda tegeduko, avu sabheya gudaarada sevemaaduvadakkoskara irabeku.avugalannu leviyarige avanavana seveya prakaara kodabeku andanu.
Numbers 7:5 in English
- King James Version (KJV)
- Take [it] of them, that they may be to do the service of the tabernacle of the congregation; and thou shalt give them unto the Levites, to every man according to his service.
- World English Bible (WEB)
- “Accept these from them, that they may be used in doing the service of the Tent of Meeting; and you shall give them to the Levites, to every man according to his service.”
- American Standard Version (ASV)
- Take it of them, that they may be [used] in doing the service of the tent of meeting; and thou shalt give them unto the Levites, to every man according to his service.
- Bible in Basic English (BBE)
- Take the things from them, to be used for the work of the Tent of meeting; and give them to the Levites, to every man what is needed for his work.
- Darby Translation (DBY)
- Take it of them, and they shall be for the performance of the service of the tent of meeting, and thou shalt give them unto the Levites, to each according to his service.
- Webster's Bible (WBS)
- Take [it] of them, that they may be to perform the service of the tabernacle of the congregation; and thou shalt give them to the Levites, to every man according to his service.
- Young's Literal Translation (YLT)
- 'Receive from them, and they have been to do the service of the tent of meeting, and thou hast given them unto the Levites, each according to his service.'
Read in context
- 3ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.
- 4ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ
- 5ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು.
- 6ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು.
- 7ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.
Cross references
- Titus 3:8 ತೀತನಿಗೆ 3:8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
- Exodus 35:4–10 ವಿಮೋಚನಕಾಂಡ 35:4–10ಮೋಶೆಯು ಇಸ್ರಾಯೇಲ್ ಮಕ್ಕಳ ಸಭೆಗೆಲ್ಲಾ-- ಕರ್ತನು ಆಜ್ಞಾಪಿಸಿದ್ದು ಇದೇ. ಅದೇನಂದರೆ-- ಕರ್ತನಿಗೋಸ್ಕರ ನಿಮ್ಮೊಳಗಿಂದ ಕಾಣಿಕೆಗಳನ್ನು ತೆಗೆದು ಕೊಳ್ಳಿರಿ. ಮನಃಪೂರ್ವಕವಾಗಿ ಕರ್ತನಿಗೆ ತರಬೇಕಾದವುಗಳು; ಚಿನ್ನ, ಬೆಳ್ಳಿ, ಹಿತ್ತಾಳೆ ನೀಲಿ, ಧೂಮ್ರ, ಕೆಂಪುವರ್ಣದ ನಯವಾದ ನಾರುಮಡಿ, ಮೇಕೆಯ ಕೂದಲು, ಕೆಂಪು ಬಣ್ಣದಲ್ಲಿ ಅದ್ದಿದ ಟಗರಿನ ಚರ್ಮಗಳು, ಕಡಲು ಹಂದಿಯ ಚರ್ಮಗಳು ಜಾಲೀಮರವು. ದೀಪಕ್ಕೋಸ್ಕರ ಎಣ್ಣೆ, ಅಭಿಷೇಕಿಸುವ ತೈಲಕ್ಕೋಸ್ಕರ ಮತ್ತು ಪರಿಮಳ ಧೂಪಕ್ಕೋಸ್ಕರ ಸುಗಂಧತೈಲ, ಗೋಮೇಧಕ, ಎಫೋದ್ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ. ನಿಮ್ಮಲ್ಲಿ ಜ್ಞಾನದ ಹೃದಯವುಳ್ಳವರೆಲ್ಲರೂ ಬಂದು ಕರ್ತನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಲಿ.
- Isaiah 49:1–8 ಯೆಶಾಯ 49:1–8ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ. ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು. ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು. ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು. ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು. ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು. ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
- Exodus 25:1–11 ವಿಮೋಚನಕಾಂಡ 25:1–11ಆಗ ಕರ್ತನು ಮಾತನಾಡಿ ಮೋಶೆಗೆ-- ನನಗೆ ಕಾಣಿಕೆಗಳನ್ನು ತಕ್ಕೊಂಡು ಬರು ವಂತೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡು; ಮನಃಪೂರ್ವಕವಾಗಿಯೂ ಹೃದಯಪೂರ್ವಕವಾ ಗಿಯೂ ಕೊಡುವ ನನ್ನ ಕಾಣಿಕೆಯನ್ನು ನೀವು ತೆಗೆದು ಕೊಳ್ಳಬೇಕು. ನೀವು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: ಚಿನ್ನ ಬೆಳ್ಳಿ ತಾಮ್ರ ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು ಕಡಲು ಹಂದಿಯ ಚರ್ಮಗಳು ಜಾಲಿ ಮರಗಳು. ದೀಪಕ್ಕಾಗಿ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರವೂ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳೂ ಎಫೋದಿ ಗಾಗಿ ಮತ್ತು ಪದಕಕ್ಕಾಗಿ ಗೋಮೇಧಿಕಗಳೂ ಕೆತ್ತಿದ ರತ್ನಗಳೂ ಇವೇ. ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು. ಗುಡಾರದ ಮಾದರಿಯನ್ನೂ ಅದರ ಎಲ್ಲಾ ಸಾಮಾನುಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮಂಜೂಷವನ್ನು ಜಾಲೀ ಮರದಿಂದ ಮಾಡಬೇಕು. ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
- Ephesians 4:11–13 ಎಫೆಸದವರಿಗೆ 4:11–13ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು. ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
- Isaiah 42:1–7 ಯೆಶಾಯ 42:1–7ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು. ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ. ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ. ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು. ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ-- ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು -- ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- Psalm 16:2–3 ಕೀರ್ತನೆಗಳು 16:2–3ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.