Numbers · chapter 7 · verse 9
Numbers 7:9 in Kannada
ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
Aadare kehaatyara kumaararige yaavadannoo kodalilla. Avaru tamma hegalugala mele hottukondu hoguvade parishuddha sthaladalli avarige sambandhapatta seveyaagittu.
Numbers 7:9 in English
- King James Version (KJV)
- But unto the sons of Kohath he gave none: because the service of the sanctuary belonging unto them [was that] they should bear upon their shoulders.
- World English Bible (WEB)
- But to the sons of Kohath he gave none, because the service of the sanctuary belonged to them; they carried it on their shoulders.
- American Standard Version (ASV)
- But unto the sons of Kohath he gave none, because the service of the sanctuary belonged unto them; they bare it upon their shoulders.
- Bible in Basic English (BBE)
- But to the sons of Kohath he gave nothing; because they had the care of the holy place, taking it about on their backs.
- Darby Translation (DBY)
- But unto the sons of Kohath he gave none, for the service of the sanctuary was upon them: they bore [what they carried] upon the shoulder.
- Webster's Bible (WBS)
- But to the sons of Kohath he gave none: because the service of the sanctuary belonging to them [was that] they should bear upon their shoulders.
- Young's Literal Translation (YLT)
- and to the sons of Kohath he hath not given, for the service of the sanctuary [is] on them: on the shoulder they bear.
Read in context
- 7ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.
- 8ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ ಎಂಟು ಎತ್ತು ಗಳನ್ನೂ ಮೆರಾರೀಯ ಕುಮಾರರಿಗೆ ಅವರ ಸೇವೆಯ ಪ್ರಕಾರ ಕೊಟ್ಟನು.
- 9ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
- 10ಪ್ರಧಾನರು ಬಲೀಪೀಠದ ಪ್ರತಿಷ್ಠೆಗಾಗಿ ಅಭಿಷೇ ಕಿಸಿದ ದಿನದಲ್ಲಿ ಅದನ್ನು ಅರ್ಪಿಸಿದರು. ಪ್ರಧಾನರು ಬಲಿಪೀಠದ ಮುಂದೆ ತಮ್ಮ ಅರ್ಪಣೆಯನ್ನು ಅರ್ಪಿಸಿ ದರು.
- 11ಕರ್ತನು ಮೋಶೆಗೆ ಹೇಳಿದ್ದೇನಂದರೆ--ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿ ಪೀಠದ ಪ್ರತಿಷ್ಠೆಗಾಗಿ ತನ್ನ ಅರ್ಪಣೆಯನ್ನು ಅರ್ಪಿಸಬೇಕು.
Cross references
- 1 Chronicles 15:13 1 ಪೂರ್ವಕಾಲವೃತ್ತಾಂತ 15:13ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು.
- Numbers 3:31 ಅರಣ್ಯಕಾಂಡ 3:31ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.
- 2 Samuel 6:13 2 ಸಮುವೇಲನು 6:13ಕರ್ತನ ಮಂಜೂಷ ವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ ಅವನು ಎತ್ತುಗಳನ್ನೂ ಕೊಬ್ಬಿದ ಪಶು ಗಳನ್ನೂ ಬಲಿಯಾಗಿ ಕೊಟ್ಟನು.
- Numbers 4:4–16 ಅರಣ್ಯಕಾಂಡ 4:4–16ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ. ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7 ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು. ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು. ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು. ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು. ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು. ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ. ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
- 1 Chronicles 23:26 1 ಪೂರ್ವಕಾಲವೃತ್ತಾಂತ 23:26ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.
- 1 Chronicles 15:3 1 ಪೂರ್ವಕಾಲವೃತ್ತಾಂತ 15:3ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.
- 2 Samuel 6:6 2 ಸಮುವೇಲನು 6:6ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.