Numbers · chapter 8 · verse 15
Numbers 8:15 in Kannada
ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.
Adara taruvaaya leviyaru seve maaduvadakke sabheya gudaaradolage praveshisu varu, neenu avarannu shuddhamaadi kaanikeyante samarpisabeku.
Numbers 8:15 in English
- King James Version (KJV)
- And after that shall the Levites go in to do the service of the tabernacle of the congregation: and thou shalt cleanse them, and offer them [for] an offering.
- World English Bible (WEB)
- “After that, the Levites shall go in to do the service of the Tent of Meeting. You shall cleanse them, and offer them as a wave offering.
- American Standard Version (ASV)
- And after that shall the Levites go in to do the service of the tent of meeting: and thou shalt cleanse them, and offer them for a wave-offering.
- Bible in Basic English (BBE)
- After that, the Levites will go in to do whatever has to be done in the Tent of meeting; you are to make them clean and give them as a wave offering.
- Darby Translation (DBY)
- And afterwards shall the Levites come in to do the service of the tent of meeting. And thou shalt cleanse them, and offer them as a wave-offering.
- Webster's Bible (WBS)
- And after that shall the Levites go in to perform the service of the tabernacle of the congregation: and thou shalt cleanse them, and offer them [for] an offering.
- Young's Literal Translation (YLT)
- and afterwards do the Levites come in to serve the tent of meeting, and thou hast cleansed them, and hast waved them — a wave-offering.
Read in context
- 13ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.
- 14ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು.
- 15ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು.
- 16ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
- 17ಇಸ್ರಾಯೇಲ್ ಮಕ್ಕಳಲ್ಲಿ ಮನುಷ್ಯರಲ್ಲಾ ದರೂ ಪಶುಗಳಲ್ಲಾದರೂ ಚೊಚ್ಚಲಾದದ್ದೆಲ್ಲಾ ನನ್ನದು; ಐಗುಪ್ತ ದೇಶದಲ್ಲಿ ಎಲ್ಲಾ ಚೊಚ್ಚಲಾದವುಗಳನ್ನು ಹೊಡೆದ ದಿವಸದಲ್ಲಿ ನಾನು ಅವರನ್ನು ನನಗಾಗಿ ಪರಿಶುದ್ಧ ಮಾಡಿಕೊಂಡೆನು.
Cross references
- Numbers 8:11 ಅರಣ್ಯಕಾಂಡ 8:11ಕರ್ತನ ಸೇವೆಯನ್ನು ಮಾಡುವವರಾಗುವಂತೆ ಆರೋನನು ಇಸ್ರಾಯೇಲ್ ಮಕ್ಕಳ ಸಮರ್ಪಣೆಗಾಗಿ ಲೇವಿಯರನ್ನು ಸಮರ್ಪಿಸಬೇಕು.
- Numbers 8:13 ಅರಣ್ಯಕಾಂಡ 8:13ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ನಿಲ್ಲಿಸಿ ಅವರನ್ನು ಕರ್ತನಿಗೆ ಕಾಣಿಕೆಯಂತೆ ಸಮರ್ಪಿಸಬೇಕು.
- 1 Chronicles 25:1–26 1 ಪೂರ್ವಕಾಲವೃತ್ತಾಂತ 25:1–26ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ;
- Numbers 3:12 ಅರಣ್ಯಕಾಂಡ 3:12ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು.
- Numbers 3:23–37 ಅರಣ್ಯಕಾಂಡ 3:23–37ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು. ಲಾಯೇಲನ ಮಗನಾದ ಎಲ್ಯಾಸಾಫನು ಗೇರ್ಷೋನ್ಯರ ತಂದೆ ಮನೆಗೆ ಮುಖ್ಯಸ್ಥನು. ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ. ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು. ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು. ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು. ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು. ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ. ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ. ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು. ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು. ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು. ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ.
- 1 Chronicles 23:1–32 1 ಪೂರ್ವಕಾಲವೃತ್ತಾಂತ 23:1–32ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು. ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು. ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು. ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು. ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು. ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು. ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು -- ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು. ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು. ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು. ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು. ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು. ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು. ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು. ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು. ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು. ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು. ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು. ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು. ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು. ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು; ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು. ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ. ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು. ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು. ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು. ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು. ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು. ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- Exodus 29:24 ವಿಮೋಚನಕಾಂಡ 29:24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.
- Numbers 4:3–32 ಅರಣ್ಯಕಾಂಡ 4:3–32ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ. ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ. ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7 ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು. ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು. ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು. ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು. ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು. ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ. ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು. ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ. ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು. ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು. ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು. ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ-- ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು. ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು. ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ. ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು. ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು. ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ. ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.