Numbers · chapter 9 · verse 11
Numbers 9:11 in Kannada
ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
Avaru eradane tingalina hadinaidane divasada saayankaaladalli aacharisali, adannu huliyillada rottigala sangadaloo kahiyaadavugala sangadaloo oota maadabeku.
Numbers 9:11 in English
- King James Version (KJV)
- The fourteenth day of the second month at even they shall keep it, [and] eat it with unleavened bread and bitter [herbs].
- World English Bible (WEB)
- In the second month, on the fourteenth day at evening they shall keep it; they shall eat it with unleavened bread and bitter herbs.
- American Standard Version (ASV)
- In the second month on the fourteenth day at even they shall keep it; they shall eat it with unleavened bread and bitter herbs:
- Bible in Basic English (BBE)
- In the second month, on the fourteenth day, in the evening, they are to keep it, taking it with unleavened bread and bitter-tasting plants;
- Darby Translation (DBY)
- In the second month, on the fourteenth day, between the two evenings, shall they hold it; with unleavened bread and bitter herbs shall they eat it.
- Webster's Bible (WBS)
- The fourteenth day of the second month at evening, they shall keep it, [and] eat it with unleavened bread and bitter [herbs] .
- Young's Literal Translation (YLT)
- in the second month, on the fourteenth day, between the evenings they prepare it; with unleavened and bitter things they eat it;
Read in context
- 9ಕರ್ತನು ಮೋಶೆ ಸಂಗಡ ಮಾತನಾಡಿ ಅವನಿಗೆ
- 10ಇಸ್ರಾಯೇಲ್ ಮಕ್ಕಳಿಗೆ--ನಿಮ್ಮಲ್ಲಿಯೂ ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಹೆಣದಿಂದ ಅಶುದ್ಧನಾಗಿದ್ದರೂ ಇಲ್ಲವೆ ದೂರ ಪ್ರಯಾಣದಲ್ಲಿ ದ್ದರೂ ಕರ್ತನಿಗೆ ಪಸ್ಕವನ್ನು ಆಚರಿಸಬೇಕು.
- 11ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
- 12ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
- 13ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
Cross references
- 2 Chronicles 30:2–15 2 ಪೂರ್ವಕಾಲವೃತ್ತಾಂತ 30:2–15ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು. ಯಾಕಂದರೆ ಯಾಜಕರು ತಮ್ಮನ್ನು ತಕ್ಕಹಾಗೆ ಪರಿಶುದ್ಧಮಾಡಿಕೊಳ್ಳದೆ ಇದ್ದದ್ದ ರಿಂದಲೂ ಜನರು ಯೆರೂಸಲೇಮಿಗೆ ಕೂಡಿ ಬಾರದೆ ಇದ್ದದ್ದರಿಂದಲೂ ಆ ಕಾಲದಲ್ಲಿ ಆಚರಿಸಲಾರದೆ ಇದ್ದರು. ಈ ಕಾರ್ಯವು ಅರಸನಿಗೂ ಸಮಸ್ತ ಸಭೆ ಯವರಿಗೂ ಒಪ್ಪಿಗೆಯಾಯಿತು. ಆದದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿ ಸಿದರು. ಯಾಕಂದರೆ ಬರೆಯಲ್ಪಟ್ಟ ಹಾಗೆ ಅವರು ಅದನ್ನು ಬಹು ಕಾಲದಿಂದ ಆಚರಿಸಿದ್ದಿಲ್ಲ. ಅದೇ ಪ್ರಕಾರ ದೂತರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತಕ್ಕೊಂಡು ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಯೆಹೂದ ದೇಶಗಳ ಮೇಲೆ ಹೋಗಿ--ಇಸ್ರಾಯೇಲ್ ಮಕ್ಕಳೇ, ಅಬ್ರಹಾಮ್ ಇಸಾಕ್ ಇಸ್ರಾಯೇಲ್ ಕರ್ತನಾದ ದೇವರ ಕಡೆಗೆ ತಿರುಗಿರಿ. ಆಗ ಆತನೂ ಅಶ್ಶೂರಿನ ಅರಸುಗಳ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಬಳಿಗೆ ತಿರುಗುವನು. ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ. ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು. ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು. ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು. ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು. ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು. ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು. ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
- John 19:36 ಯೋಹಾನನು 19:36ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
- Deuteronomy 16:3 ಧರ್ಮೋಪದೇಶಕಾಂಡ 16:3ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
- Numbers 9:3 ಅರಣ್ಯಕಾಂಡ 9:3ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
- Exodus 12:2–14 ವಿಮೋಚನಕಾಂಡ 12:2–14ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು. ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು. ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ. ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು. ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ. ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ. ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
- Exodus 12:43–49 ವಿಮೋಚನಕಾಂಡ 12:43–49ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು. ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು. ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು. ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು. ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು. ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು. ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.