Numbers · chapter 9 · verse 2
Numbers 9:2 in Kannada
ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.
Israayel makkalu paskavannu nemisida samaya dalli aacharisabeku.
Numbers 9:2 in English
- King James Version (KJV)
- Let the children of Israel also keep the passover at his appointed season.
- World English Bible (WEB)
- “Let the children of Israel keep the Passover in its appointed season.
- American Standard Version (ASV)
- Moreover let the children of Israel keep the passover in its appointed season.
- Bible in Basic English (BBE)
- Let the children of Israel keep the Passover at its regular time.
- Darby Translation (DBY)
- Let the children of Israel also hold the passover at its set time;
- Webster's Bible (WBS)
- Let the children of Israel also keep the passover at its appointed season.
- Young's Literal Translation (YLT)
- 'Also, the sons of Israel prepare the passover in its appointed season;
Read in context
- 1ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ
- 2ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.
- 3ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
- 4ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿದನು.
Cross references
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- Deuteronomy 16:1–2 ಧರ್ಮೋಪದೇಶಕಾಂಡ 16:1–2ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು; ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
- Leviticus 23:5 ಯಾಜಕಕಾಂಡ 23:5ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
- 2 Chronicles 35:1 2 ಪೂರ್ವಕಾಲವೃತ್ತಾಂತ 35:1ಇದಲ್ಲದೆ ಯೋಷೀಯನು ಯೆರೂಸ ಲೇಮಿನಲ್ಲಿ ಕರ್ತನಿಗೆ ಪಸ್ಕವನ್ನು ಆಚರಿ ಸಿದನು. ಮೊದಲನೇ ತಿಂಗಳ ಹದಿನಾಲ್ಕನೇ ದಿವಸ ದಲ್ಲಿ ಪಸ್ಕದ ಕುರಿಯನ್ನು ವಧಿಸಿದರು.
- Luke 22:7 ಲೂಕನು 22:7ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
- Ezra 6:19 ಎಜ್ರನು 6:19ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
- Mark 14:12 ಮಾರ್ಕನು 14:12ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
- Joshua 5:10 ಯೆಹೋಶುವ 5:10ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
- Exodus 12:1–20 ವಿಮೋಚನಕಾಂಡ 12:1–20ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು. ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು. ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ. ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು. ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ. ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ. ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು. ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು. ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು. ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- Numbers 28:16 ಅರಣ್ಯಕಾಂಡ 28:16ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.