Numbers · chapter 9 · verse 3
Numbers 9:3 in Kannada
ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
Ee tingalina hadinaalkane divasada saayankaaladalli adannu adara samaya dalli aacharisabeku. Adara aajnyaavidhigala prakaara vaagiyoo ellaa niyamagala prakaaravaagiyoo adannu aacharisabeku.
Numbers 9:3 in English
- King James Version (KJV)
- In the fourteenth day of this month, at even, ye shall keep it in his appointed season: according to all the rites of it, and according to all the ceremonies thereof, shall ye keep it.
- World English Bible (WEB)
- On the fourteenth day of this month, at evening, you shall keep it in its appointed season. You shall keep it according to all its statutes and according to all its ordinances.”
- American Standard Version (ASV)
- In the fourteenth day of this month, at even, ye shall keep it in its appointed season: according to all the statutes of it, and according to all the ordinances thereof, shall ye keep it.
- Bible in Basic English (BBE)
- In the fourteenth day of this month, at evening, you are to keep it at the regular time, and in the way ordered in the law.
- Darby Translation (DBY)
- on the fourteenth day in this month between the two evenings, ye shall hold it at its set time; according to all the rites of it, and according to all the ordinances thereof shall ye hold it.
- Webster's Bible (WBS)
- In the fourteenth day of this month, at evening, ye shall keep it in its appointed season: according to all its rites, and according to all its ceremonies, shall ye keep it.
- Young's Literal Translation (YLT)
- in the fourteenth day of this month between the evenings ye prepare it in its appointed season; according to all its statutes, and according to all its ordinances ye prepare it.'
Read in context
- 1ಅವರು ಐಗುಪ್ತ ದೇಶದಿಂದ ಹೊರಟ ಎರಡನೇ ವರುಷದ ಮೊದಲನೆಯ ತಿಂಗಳಿನಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ
- 2ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.
- 3ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
- 4ಆಗ ಮೋಶೆಯು ಪಸ್ಕವನ್ನು ಆಚರಿಸುವದಕ್ಕೆ ಇಸ್ರಾಯೇಲ್ ಮಕ್ಕಳ ಸಂಗಡ ಮಾತ ನಾಡಿದನು.
- 5ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
Cross references
- Exodus 12:6–11 ವಿಮೋಚನಕಾಂಡ 12:6–11ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Numbers 9:11–12 ಅರಣ್ಯಕಾಂಡ 9:11–12ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು. ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
- Leviticus 23:5 ಯಾಜಕಕಾಂಡ 23:5ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
- 2 Chronicles 30:2 2 ಪೂರ್ವಕಾಲವೃತ್ತಾಂತ 30:2ಯೆರೂಸಲೇಮಿ ನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೇ ತಿಂಗಳಲ್ಲಿ ಪಸ್ಕವನ್ನು ಆಚರಿ ಸಲು ಯೋಚಿಸಿಕೊಂಡರು.
- 2 Chronicles 30:15 2 ಪೂರ್ವಕಾಲವೃತ್ತಾಂತ 30:15ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.