Obadiah · chapter 1 · verse 15
Obadiah 1:15 in Kannada
ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
Kartana dinavu ellaa janaangagala mele saviాpavaagide; neenu maadida haageye ninage maadalpaduvadu; ninna pratiphalavu ninna taleya mele tiruguvadu.
Obadiah 1:15 in English
- King James Version (KJV)
- For the day of the LORD [is] near upon all the heathen: as thou hast done, it shall be done unto thee: thy reward shall return upon thine own head.
- World English Bible (WEB)
- For the day of the LORD is near all the nations! As you have done, it will be done to you. Your deeds will return upon your own head.
- American Standard Version (ASV)
- For the day of Jehovah is near upon all the nations: as thou hast done, it shall be done unto thee; thy dealing shall return upon thine own head.
- Bible in Basic English (BBE)
- For the day of the Lord is coming quickly on all nations: as you have done it will be done to you; the reward of your acts will come on your head.
- Darby Translation (DBY)
- For the day of Jehovah is near upon all the nations: as thou hast done, it shall be done unto thee: thy recompence shall return upon thine own head.
- Webster's Bible (WBS)
- For the day of the LORD [is] near upon all the heathen: as thou hast done, it shall be done to thee: thy reward shall return upon thy own head.
- Young's Literal Translation (YLT)
- For near [is] the day of Jehovah, on all the nations, As thou hast done, it is done to thee, Thy deed doth turn back on thine own head.
Read in context
- 13ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು;
- 14ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
- 15ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
- 16ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
- 17ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
Cross references
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Habakkuk 2:8 ಹಬಕ್ಕೂಕ 2:8ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
- Matthew 7:2 ಮತ್ತಾಯನು 7:2ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Ezekiel 30:3 ಯೆಹೆಜ್ಕೇಲನು 30:3ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
- Joel 3:7–8 ಯೋವೇಲ 3:7–8ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
- Jeremiah 50:29 ಯೆರೆಮೀಯ 50:29ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
- Joel 3:11–14 ಯೋವೇಲ 3:11–14ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ. ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- Jeremiah 49:12 ಯೆರೆಮೀಯ 49:12ಕರ್ತನು ಹೀಗೆ ಹೇಳು ತ್ತಾನೆ--ಇಗೋ ಪಾತ್ರೆಯಲ್ಲಿ ಕುಡಿಯುವದಕ್ಕೆ ಯಾರಿಗೆ ನ್ಯಾಯತೀರ್ವಿಕೆ ಆಗಲಿಲ್ಲವೋ? ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಅಪರಾಧ ವಿಲ್ಲದೆ ಇರುವಿಯೋ? ಅಪರಾಧವಿಲ್ಲದೆ ಇರುವದಿಲ್ಲ ನಿಶ್ಚಯವಾಗಿ ಕುಡಿಯುವಿ.
- Psalm 137:8 ಕೀರ್ತನೆಗಳು 137:8ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Micah 5:15 ಮೀಕ 5:15ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
- Joel 1:15 ಯೋವೇಲ 1:15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.