Philemon · chapter 1 · verse 10
Philemon 1:10 in Kannada
ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
Naanu sereyalli padediruva nanna maganaada onesimana vishayadalli ninnannu bedikolluttene.
Philemon 1:10 in English
- King James Version (KJV)
- I beseech thee for my son Onesimus, whom I have begotten in my bonds:
- World English Bible (WEB)
- I appeal to you for my child Onesimus, whom I have become the father of in my chains,
- American Standard Version (ASV)
- I beseech thee for my child, whom I have begotten in my bonds, Onesimus,
- Bible in Basic English (BBE)
- My request is for my child Onesimus, the child of my chains,
- Darby Translation (DBY)
- I exhort thee for my child, whom I have begotten in [my] bonds, Onesimus,
- Webster's Bible (WBS)
- I beseech thee for my son Onesimus, whom I have begotten in my bonds:
- Young's Literal Translation (YLT)
- I entreat thee concerning my child — whom I did beget in my bonds — Onesimus,
Read in context
- 8ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ
- 9ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
- 10ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
- 11ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ.
- 12ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ; ಅದದ ರಿಂದ ನೀನು ಅವನನ್ನು ಸೇರಿಸಿಕೋ.
Cross references
- Colossians 4:9 ಕೊಲೊಸ್ಸೆಯವರಿಗೆ 4:9ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
- 1 Corinthians 4:15 1 ಕೊರಿಂಥದವರಿಗೆ 4:15ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
- Galatians 4:19 ಗಲಾತ್ಯದವರಿಗೆ 4:19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- 1 Timothy 1:2 1 ತಿಮೊಥೆಯನಿಗೆ 1:2ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- Titus 1:4 ತೀತನಿಗೆ 1:4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
- 2 Samuel 19:37–38 2 ಸಮುವೇಲನು 19:37–38ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು. ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.
- 2 Samuel 18:5 2 ಸಮುವೇಲನು 18:5ಆದರೆ ಅರಸನು ಯೋವಾಬನಿಗೂ ಅಬೀ ಷೈಯನಿಗೂ ಇತ್ತೈಗೂ ಆಜ್ಞಾಪಿಸಿ--ನನಗೋಸ್ಕರ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಅಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಚ ಆಜ್ಞೆಯನ್ನು ಜನರೆಲ್ಲರೂ ಕೇಳಿದರು.
- 2 Samuel 9:1–7 2 ಸಮುವೇಲನು 9:1–7ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು. ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು. ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು. ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು. ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು. ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು. ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
- Mark 9:17 ಮಾರ್ಕನು 9:17ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.