Philippians · chapter 1 · verse 3
Philippians 1:3 in Kannada
ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ;
Naanu nimmannu nenasikolluvaagellaa nanna devarige krutajnyataastuti maaduttene;
Philippians 1:3 in English
- King James Version (KJV)
- I thank my God upon every remembrance of you,
- World English Bible (WEB)
- I thank my God whenever I remember you,
- American Standard Version (ASV)
- I thank my God upon all my remembrance of you,
- Bible in Basic English (BBE)
- I give praise to my God at every memory of you,
- Darby Translation (DBY)
- I thank my God for my whole remembrance of you,
- Webster's Bible (WBS)
- I thank my God upon every remembrance of you,
- Young's Literal Translation (YLT)
- I give thanks to my God upon all the remembrance of you,
Read in context
- 1ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
- 2ನಮ್ಮ ತಂದೆ ಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತ ನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 3ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ;
- 4ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.
- 5ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.
Cross references
- 1 Corinthians 1:4 1 ಕೊರಿಂಥದವರಿಗೆ 1:4ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
- 1 Thessalonians 1:2–3 1 ಥೆಸಲೊನೀಕದವರಿಗೆ 1:2–3ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
- Philemon 1:4–5 ಫಿಲೆಮೋನನಿಗೆ 1:4–5ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
- 2 Timothy 1:3 2 ತಿಮೊಥೆಯನಿಗೆ 1:3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
- Ephesians 1:15–16 ಎಫೆಸದವರಿಗೆ 1:15–16ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.
- Colossians 1:3–4 ಕೊಲೊಸ್ಸೆಯವರಿಗೆ 1:3–4ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ. ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
- 1 Thessalonians 3:9 1 ಥೆಸಲೊನೀಕದವರಿಗೆ 3:9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
- Romans 1:8–9 ರೋಮಾಪುರದವರಿಗೆ 1:8–9ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ. ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- Romans 6:17 ರೋಮಾಪುರದವರಿಗೆ 6:17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.