Philippians · chapter 1 · verse 30
Philippians 1:30 in Kannada
ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
Heege neevu nannalli kandantha mattu eega nannalliruvadendu neevu keluvantha horaatave nimaguntu.
Philippians 1:30 in English
- King James Version (KJV)
- Having the same conflict which ye saw in me, and now hear [to be] in me.
- World English Bible (WEB)
- having the same conflict which you saw in me and now hear is in me.
- American Standard Version (ASV)
- having the same conflict which ye saw in me, and now hear to be in me.
- Bible in Basic English (BBE)
- Fighting the same fight which you saw in me, and now have word of in me.
- Darby Translation (DBY)
- having the same conflict which ye have seen in me, and now hear of in me.
- Webster's Bible (WBS)
- Having the same conflict which ye saw in me, [and] now hear [to be] in me.
- Young's Literal Translation (YLT)
- the same conflict having, such as ye saw in me, and now hear of in me.
Read in context
- 28ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
- 29ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
- 30ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
Cross references
- 1 Thessalonians 2:2 1 ಥೆಸಲೊನೀಕದವರಿಗೆ 2:2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- Acts 16:19–40 ಅಪೊಸ್ತಲರ ಕೃತ್ಯಗಳು 16:19–40ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು. ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ. ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು. ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು. ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು. ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು. ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು. ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು. ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು. ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು. ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು. ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು. ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು. ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು. ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು. ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು. ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು. ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು. ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
- 2 Timothy 4:7 2 ತಿಮೊಥೆಯನಿಗೆ 4:7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
- Romans 8:35–37 ರೋಮಾಪುರದವರಿಗೆ 8:35–37ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- Hebrews 12:4 ಇಬ್ರಿಯರಿಗೆ 12:4ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- 2 Timothy 2:10–12 2 ತಿಮೊಥೆಯನಿಗೆ 2:10–12ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ. ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು. ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
- Ephesians 6:11–18 ಎಫೆಸದವರಿಗೆ 6:11–18ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- 1 Timothy 6:12 1 ತಿಮೊಥೆಯನಿಗೆ 6:12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- Hebrews 10:32–33 ಇಬ್ರಿಯರಿಗೆ 10:32–33ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ. ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
- Revelation 2:10–11 ಪ್ರಕಟನೆ 2:10–11ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.