Skip to content
ThuthiThuthiThuthi
Philippians · chapter 4 of 4 · 23 verses

Philippians 4 in Kannada

ಫಿಲಿಪ್ಪಿಯವರಿಗೆ 4

  1. ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.

    Therefore, my brethren dearly beloved and longed for, my joy and crown, so stand fast in the Lord, [my] dearly beloved.

  2. ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.

    I beseech Euodias, and beseech Syntyche, that they be of the same mind in the Lord.

  3. ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್‌ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.

    And I intreat thee also, true yokefellow, help those women which laboured with me in the gospel, with Clement also, and [with] other my fellowlabourers, whose names [are] in the book of life.

  4. ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.

    Rejoice in the Lord alway: [and] again I say, Rejoice.

  5. ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.

    Let your moderation be known unto all men. The Lord [is] at hand.

  6. ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.

    Be careful for nothing; but in every thing by prayer and supplication with thanksgiving let your requests be made known unto God.

  7. ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.

    And the peace of God, which passeth all understanding, shall keep your hearts and minds through Christ Jesus.

  8. ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ

    Finally, brethren, whatsoever things are true, whatsoever things [are] honest, whatsoever things [are] just, whatsoever things [are] pure, whatsoever things [are] lovely, whatsoever things [are] of good report; if [there be] any virtue, and if [there be] any praise, think on these things.

  9. ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.

    Those things, which ye have both learned, and received, and heard, and seen in me, do: and the God of peace shall be with you.

  10. ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.

    But I rejoiced in the Lord greatly, that now at the last your care of me hath flourished again; wherein ye were also careful, but ye lacked opportunity.

  11. ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.

    Not that I speak in respect of want: for I have learned, in whatsoever state I am, [therewith] to be content.

  12. ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.

    I know both how to be abased, and I know how to abound: every where and in all things I am instructed both to be full and to be hungry, both to abound and to suffer need.

  13. ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.

    I can do all things through Christ which strengtheneth me.

  14. ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.

    Notwithstanding ye have well done, that ye did communicate with my affliction.

  15. ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.

    Now ye Philippians know also, that in the beginning of the gospel, when I departed from Macedonia, no church communicated with me as concerning giving and receiving, but ye only.

  16. ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.

    For even in Thessalonica ye sent once and again unto my necessity.

  17. ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.

    Not because I desire a gift: but I desire fruit that may abound to your account.

  18. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ

    But I have all, and abound: I am full, having received of Epaphroditus the things [which were sent] from you, an odour of a sweet smell, a sacrifice acceptable, wellpleasing to God.

  19. ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.

    But my God shall supply all your need according to his riches in glory by Christ Jesus.

  20. ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್‌.

    Now unto God and our Father [be] glory for ever and ever. Amen.

  21. ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬ ಪರಿಶುದ್ಧನಿಗೆ ವಂದನೆ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.

    Salute every saint in Christ Jesus. The brethren which are with me greet you.

  22. ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.

    All the saints salute you, chiefly they that are of Caesar’s household.

  23. ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್‌.

    The grace of our Lord Jesus Christ [be] with you all. Amen.

All chapters of Philippians · Kannada Bible · Philippians 4 in Tamil

Kannada Bible: Kannada Old Version, public domain.

King James Version: public domain.