Philippians · chapter 4 · verse 17
Philippians 4:17 in Kannada
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
Naanu nimminda daanavannu apekshisuvenentalla aadare nimma lekkakke samruddhiyaada phalavanne apekshisu ttene. Aadare bekaadaddella nanaguntu, samruddhi yaayitu.
Philippians 4:17 in English
- King James Version (KJV)
- Not because I desire a gift: but I desire fruit that may abound to your account.
- World English Bible (WEB)
- Not that I seek for the gift, but I seek for the fruit that increases to your account.
- American Standard Version (ASV)
- Not that I seek for the gift; but I seek for the fruit that increaseth to your account.
- Bible in Basic English (BBE)
- Not that I am looking for an offering, but for fruit which may be put to your credit.
- Darby Translation (DBY)
- Not that I seek gift, but I seek fruit abounding to your account.
- Webster's Bible (WBS)
- Not because I desire a gift: but I desire fruit that may abound to your account.
- Young's Literal Translation (YLT)
- not that I seek after the gift, but I seek after the fruit that is overflowing to your account;
Read in context
- 15ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
- 16ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
- 17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
- 18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- 19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
Cross references
- Titus 3:14 ತೀತನಿಗೆ 3:14ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- 2 Corinthians 9:9–13 2 ಕೊರಿಂಥದವರಿಗೆ 9:9–13(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
- John 15:8 ಯೋಹಾನನು 15:8ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
- Philippians 4:11 ಫಿಲಿಪ್ಪಿಯವರಿಗೆ 4:11ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- Luke 14:12–14 ಲೂಕನು 14:12–14ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ; ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
- 1 Peter 5:2 1 ಪೇತ್ರನು 5:2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
- 2 Corinthians 9:5 2 ಕೊರಿಂಥದವರಿಗೆ 9:5ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
- 1 Thessalonians 2:5 1 ಥೆಸಲೊನೀಕದವರಿಗೆ 2:5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
- Matthew 25:34–40 ಮತ್ತಾಯನು 25:34–40ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.