Proverbs · chapter 1 · verse 10
Proverbs 1:10 in Kannada
ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
Nanna magane, paapi galu ninnannu aakarshisidare neenu oppabeda.
Proverbs 1:10 in English
- King James Version (KJV)
- My son, if sinners entice thee, consent thou not.
- World English Bible (WEB)
- My son, if sinners entice you, don’t consent.
- American Standard Version (ASV)
- My son, if sinners entice thee, Consent thou not.
- Bible in Basic English (BBE)
- My son, if sinners would take you out of the right way, do not go with them.
- Darby Translation (DBY)
- My son, if sinners entice thee, consent not.
- Webster's Bible (WBS)
- My son, if sinners entice thee, consent thou not.
- Young's Literal Translation (YLT)
- My son, if sinners entice thee be not willing.
Read in context
- 8ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
- 9ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
- 10ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
- 11ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
- 12ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
Cross references
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- Proverbs 16:29 ಜ್ಞಾನೋಕ್ತಿಗಳು 16:29ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Deuteronomy 13:8 ಧರ್ಮೋಪದೇಶಕಾಂಡ 13:8ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Proverbs 7:21–23 ಜ್ಞಾನೋಕ್ತಿಗಳು 7:21–23ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು. ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Psalm 50:18 ಕೀರ್ತನೆಗಳು 50:18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- Proverbs 20:19 ಜ್ಞಾನೋಕ್ತಿಗಳು 20:19ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.
- Genesis 39:7–13 ಆದಿಕಾಂಡ 39:7–13ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ. ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು. ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು. ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ. ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು. ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು