Proverbs · chapter 1 · verse 12
Proverbs 1:12 in Kannada
ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
Gundiyolakke hoguvavarannu nunguvante sampoornavaagi naavu avarannu samaadhiyante nungibidona.
Proverbs 1:12 in English
- King James Version (KJV)
- Let us swallow them up alive as the grave; and whole, as those that go down into the pit:
- World English Bible (WEB)
- Let’s swallow them up alive like Sheol, and whole, like those who go down into the pit.
- American Standard Version (ASV)
- Let us swallow them up alive as Sheol, And whole, as those that go down into the pit;
- Bible in Basic English (BBE)
- Let us overcome them living, like the underworld, and in their strength, as those who go down to death;
- Darby Translation (DBY)
- let us swallow them up alive as Sheol, and whole, as those that go down into the pit;
- Webster's Bible (WBS)
- Let us swallow them up alive as the grave; and whole, as those that go down into the pit:
- Young's Literal Translation (YLT)
- We swallow them as Sheol — alive, And whole — as those going down [to] the pit,
Read in context
- 10ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
- 11ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
- 12ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
- 13ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
- 14ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.
Cross references
- Psalm 28:1 ಕೀರ್ತನೆಗಳು 28:1ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
- Psalm 124:3 ಕೀರ್ತನೆಗಳು 124:3ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು.
- Romans 3:13 ರೋಮಾಪುರದವರಿಗೆ 3:13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
- Lamentations 2:5 ಪ್ರಲಾಪಗಳು 2:5ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
- Psalm 57:3 ಕೀರ್ತನೆಗಳು 57:3ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
- Numbers 16:30–33 ಅರಣ್ಯಕಾಂಡ 16:30–33ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು. ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Psalm 5:9 ಕೀರ್ತನೆಗಳು 5:9ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
- Numbers 26:10 ಅರಣ್ಯಕಾಂಡ 26:10ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
- Jeremiah 51:34 ಯೆರೆಮೀಯ 51:34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
- Psalm 35:25 ಕೀರ್ತನೆಗಳು 35:25ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
- Micah 3:2–3 ಮೀಕ 3:2–3ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.