Proverbs · chapter 1 · verse 13
Proverbs 1:13 in Kannada
ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
Amoolyavaada ellaa sampattannu naavu kandu hididu kolleyinda namma manegalannu tumbi kollona.
Proverbs 1:13 in English
- King James Version (KJV)
- We shall find all precious substance, we shall fill our houses with spoil:
- World English Bible (WEB)
- We’ll find all valuable wealth. We’ll fill our houses with plunder.
- American Standard Version (ASV)
- We shall find all precious substance; We shall fill our houses with spoil;
- Bible in Basic English (BBE)
- Goods of great price will be ours, our houses will be full of wealth;
- Darby Translation (DBY)
- we shall find all precious substance, we shall fill our houses with spoil:
- Webster's Bible (WBS)
- We shall find all precious substance, we shall fill our houses with spoil:
- Young's Literal Translation (YLT)
- Every precious substance we find, We fill our houses [with] spoil,
Read in context
- 11ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
- 12ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
- 13ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
- 14ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.
- 15ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
Cross references
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Job 24:2–3 ಯೋಬನು 24:2–3ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ. ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.
- Luke 12:15 ಲೂಕನು 12:15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
- Isaiah 10:13–14 ಯೆಶಾಯ 10:13–14ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
- Haggai 2:9 ಹಗ್ಗಾಯ 2:9ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Proverbs 1:19 ಜ್ಞಾನೋಕ್ತಿಗಳು 1:19ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- Nahum 2:12 ನಹೂಮ 2:12ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
- Revelation 18:9–16 ಪ್ರಕಟನೆ 18:9–16ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
- Jeremiah 22:16–17 ಯೆರೆಮೀಯ 22:16–17ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.