Proverbs · chapter 1 · verse 27
Proverbs 1:27 in Kannada
ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
Nimma bhayavu teevra duhkhadanteyoo nimma naashanavu tuphaaninanteyoo baruvaaga apaaya mattu aapattu nimma mele baruvaaga naanu saha nakku parihaasyamaaduvenu.
Proverbs 1:27 in English
- King James Version (KJV)
- When your fear cometh as desolation, and your destruction cometh as a whirlwind; when distress and anguish cometh upon you.
- World English Bible (WEB)
- when calamity overtakes you like a storm, when your disaster comes on like a whirlwind, when distress and anguish come on you.
- American Standard Version (ASV)
- When your fear cometh as a storm, And your calamity cometh on as a whirlwind; When distress and anguish come upon you.
- Bible in Basic English (BBE)
- When your fear comes on you like a storm, and your trouble like a rushing wind; when pain and sorrow come on you.
- Darby Translation (DBY)
- when your fear cometh as sudden destruction, and your calamity cometh as a whirlwind; when distress and anguish come upon you:
- Webster's Bible (WBS)
- When your fear cometh as desolation, and your destruction cometh as a whirlwind; when distress and anguish cometh upon you.
- Young's Literal Translation (YLT)
- When your fear cometh as destruction, And your calamity as a hurricane doth come, When on you come adversity and distress.
Read in context
- 25ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
- 26ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ
- 27ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
- 28ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- 29ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
Cross references
- Proverbs 3:25–26 ಜ್ಞಾನೋಕ್ತಿಗಳು 3:25–26ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು. ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
- Isaiah 17:13 ಯೆಶಾಯ 17:13ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Psalm 69:22–28 ಕೀರ್ತನೆಗಳು 69:22–28ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ. ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು. ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ. ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ. ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ. ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ. ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Luke 21:23–26 ಲೂಕನು 21:23–26ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು. ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು. ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
- Romans 2:9 ರೋಮಾಪುರದವರಿಗೆ 2:9ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Proverbs 10:24–25 ಜ್ಞಾನೋಕ್ತಿಗಳು 10:24–25ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು. ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
- Psalm 58:9 ಕೀರ್ತನೆಗಳು 58:9ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
- Nahum 1:3 ನಹೂಮ 1:3ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- Luke 21:34–35 ಲೂಕನು 21:34–35ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ. ಯಾಕಂದರೆ ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಉರ್ಲಿನಂತೆ ಬರುವದು.
- Revelation 6:15–17 ಪ್ರಕಟನೆ 6:15–17ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.