Proverbs · chapter 1 · verse 32
Proverbs 1:32 in Kannada
ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
Ajnyaani gala vimukhavu avarannu kolluvadu, jnyaana heenara elige avarannu naashapadisuvadu.nanage kivigoduvavanaadaro jeevisi yaava kedina bhayavillade nemmadiyalliruvanu.
Proverbs 1:32 in English
- King James Version (KJV)
- For the turning away of the simple shall slay them, and the prosperity of fools shall destroy them.
- World English Bible (WEB)
- For the backsliding of the simple will kill them. The careless ease of fools will destroy them.
- American Standard Version (ASV)
- For the backsliding of the simple shall slay them, And the careless ease of fools shall destroy them.
- Bible in Basic English (BBE)
- For the turning back of the simple from teaching will be the cause of their death, and the peace of the foolish will be their destruction.
- Darby Translation (DBY)
- For the turning away of the simple shall slay them, and the prosperity of the foolish shall cause them to perish.
- Webster's Bible (WBS)
- For the turning away of the simple shall slay them, and the prosperity of fools shall destroy them.
- Young's Literal Translation (YLT)
- For the turning of the simple slayeth them, And the security of the foolish destroyeth them.
Read in context
- 30ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
- 31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- 32ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- 33ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
Cross references
- Proverbs 8:36 ಜ್ಞಾನೋಕ್ತಿಗಳು 8:36ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- John 3:36 ಯೋಹಾನನು 3:36ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Luke 16:19–25 ಲೂಕನು 16:19–25ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Luke 12:16–21 ಲೂಕನು 12:16–21ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು. ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- Deuteronomy 32:15–44 ಧರ್ಮೋಪದೇಶಕಾಂಡ 32:15–44ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು. ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ. ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು! ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು? ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ. ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ. ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ. ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ? ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ. ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು. ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ, ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ. ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ. ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ. ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
- James 5:5 ಯಾಕೋಬನು 5:5ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- Jeremiah 48:11–12 ಯೆರೆಮೀಯ 48:11–12ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ. ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು.
- Psalm 69:22 ಕೀರ್ತನೆಗಳು 69:22ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
- Hebrews 12:8 ಇಬ್ರಿಯರಿಗೆ 12:8ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.
- Psalm 92:6–7 ಕೀರ್ತನೆಗಳು 92:6–7ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು. ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.