Proverbs · chapter 10 · verse 25
Proverbs 10:25 in Kannada
ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
Hege birugaaliyu beesuvado haageye dushtaru illavaaguvaru. Neetivantanu shaashvatavaada astivaara vaagiddaane.
Proverbs 10:25 in English
- King James Version (KJV)
- As the whirlwind passeth, so [is] the wicked no [more:] but the righteous [is] an everlasting foundation.
- World English Bible (WEB)
- When the whirlwind passes, the wicked is no more; but the righteous stand firm forever.
- American Standard Version (ASV)
- When the whirlwind passeth, the wicked is no more; But the righteous is an everlasting foundation.
- Bible in Basic English (BBE)
- When the storm-wind is past, the sinner is seen no longer, but the upright man is safe for ever.
- Darby Translation (DBY)
- As a whirlwind passeth, so is the wicked no [more]; but the righteous is an everlasting foundation.
- Webster's Bible (WBS)
- As the whirlwind passeth, so [is] the wicked no [more] : but the righteous [is] an everlasting foundation.
- Young's Literal Translation (YLT)
- As the passing by of a hurricane, So the wicked is not, And the righteous is a foundation age-during.
Read in context
- 23ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.
- 24ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
- 25ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
- 26ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
- 27ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
Cross references
- Psalm 15:5 ಕೀರ್ತನೆಗಳು 15:5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Psalm 58:9 ಕೀರ್ತನೆಗಳು 58:9ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
- Proverbs 12:3 ಜ್ಞಾನೋಕ್ತಿಗಳು 12:3ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
- Matthew 7:24–27 ಮತ್ತಾಯನು 7:24–27ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Proverbs 12:7 ಜ್ಞಾನೋಕ್ತಿಗಳು 12:7ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
- Proverbs 1:27 ಜ್ಞಾನೋಕ್ತಿಗಳು 1:27ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- 1 Timothy 6:19 1 ತಿಮೊಥೆಯನಿಗೆ 6:19ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
- Job 21:18 ಯೋಬನು 21:18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
- Isaiah 40:24 ಯೆಶಾಯ 40:24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
- Ephesians 2:20 ಎಫೆಸದವರಿಗೆ 2:20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;