Proverbs · chapter 11 · verse 14
Proverbs 11:14 in Kannada
ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
Aalochane illadiruvalli janaru beeluttaare; salahegaarara samoohadalli bhadrate ide.
Proverbs 11:14 in English
- King James Version (KJV)
- Where no counsel [is], the people fall: but in the multitude of counsellors [there is] safety.
- World English Bible (WEB)
- Where there is no wise guidance, the nation falls, but in the multitude of counselors there is victory.
- American Standard Version (ASV)
- Where no wise guidance is, the people falleth; But in the multitude of counsellors there is safety.
- Bible in Basic English (BBE)
- When there is no helping suggestion the people will have a fall, but with a number of wise guides they will be safe.
- Darby Translation (DBY)
- Where no advice is, the people fall; but in the multitude of counsellors there is safety.
- Webster's Bible (WBS)
- Where no counsel [is] , the people fall: but in the multitude of counselors [there is] safety.
- Young's Literal Translation (YLT)
- Without counsels do a people fall, And deliverance [is] in a multitude of counsellors.
Read in context
- 12ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.
- 13ಚಾಡಿಕೋರನು ರಹಸ್ಯಗಳನ್ನು ಬಹಿರಂಗ ಪಡಿಸುತ್ತಾನೆ. ನಂಬಿಕೆಯ ಆತ್ಮವುಳ್ಳವನು ಸಂಗತಿಯನ್ನು ಮುಚ್ಚುತ್ತಾನೆ.
- 14ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
- 15ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.
- 16ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ.
Cross references
- Proverbs 24:6 ಜ್ಞಾನೋಕ್ತಿಗಳು 24:6ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
- Proverbs 15:22 ಜ್ಞಾನೋಕ್ತಿಗಳು 15:22ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.
- Proverbs 20:18 ಜ್ಞಾನೋಕ್ತಿಗಳು 20:18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
- Proverbs 16:22 ಜ್ಞಾನೋಕ್ತಿಗಳು 16:22ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.
- 1 Kings 12:1–19 1 ಅರಸುಗಳು 12:1–19ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು. (ಅರಸನಾದ ಸೊಲೊಮೋನನ ಸಮ್ಮುಖ ದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು) ಇನ್ನೂ ಐಗುಪ್ತದಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿದಾಗ ಅವರು ಅವ ನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು. ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು. ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು. ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು. ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು. ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು. ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ-- ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು. ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು. ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ-- ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು. ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು. ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು. ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು. ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು. ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು.
- Isaiah 19:11–14 ಯೆಶಾಯ 19:11–14ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ? ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ. ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ. ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- Acts 15:6–21 ಅಪೊಸ್ತಲರ ಕೃತ್ಯಗಳು 15:6–21ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ. ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು. ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು. ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ? ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು. ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು. ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ; ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ. ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ-- ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು. ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ. ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ. ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ. ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು. ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.