Proverbs · chapter 11 · verse 16
Proverbs 11:16 in Kannada
ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ.
Krupeyulla streeyu tanna gauravavannu kaapaadikolluttaale. Balishtharu aishvaryavannu kaapaadikolluttaare.
Proverbs 11:16 in English
- King James Version (KJV)
- A gracious woman retaineth honour: and strong [men] retain riches.
- World English Bible (WEB)
- A gracious woman obtains honor, but violent men obtain riches.
- American Standard Version (ASV)
- A gracious woman obtaineth honor; And violent men obtain riches.
- Bible in Basic English (BBE)
- A woman who is full of grace is honoured, but a woman hating righteousness is a seat of shame: those hating work will undergo loss, but the strong keep their wealth.
- Darby Translation (DBY)
- A gracious woman retaineth honour; and the violent retain riches.
- Webster's Bible (WBS)
- A gracious woman retaineth honor: and strong [men] retain riches.
- Young's Literal Translation (YLT)
- A gracious woman retaineth honour, And terrible [men] retain riches.
Read in context
- 14ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
- 15ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.
- 16ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ.
- 17ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
- 18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
Cross references
- Proverbs 31:30–31 ಜ್ಞಾನೋಕ್ತಿಗಳು 31:30–31ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ. ಆಕೆಯ ಕೈಕೆಲಸದ ಪ್ರತಿಫಲವನ್ನು ಸಲ್ಲಿಸಿರಿ; ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.
- Luke 10:42 ಲೂಕನು 10:42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Acts 16:14–15 ಅಪೊಸ್ತಲರ ಕೃತ್ಯಗಳು 16:14–15ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
- 1 Samuel 25:32–33 1 ಸಮುವೇಲನು 25:32–33ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ. ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.
- Acts 9:39 ಅಪೊಸ್ತಲರ ಕೃತ್ಯಗಳು 9:39ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ
- Luke 11:21–22 ಲೂಕನು 11:21–22ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು. ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
- Luke 8:3 ಲೂಕನು 8:3ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.
- Matthew 26:13 ಮತ್ತಾಯನು 26:13ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
- Esther 9:25 ಎಸ್ತೇರಳು 9:25ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
- 2 Samuel 20:16–22 2 ಸಮುವೇಲನು 20:16–22ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ--ಕೇಳಿರಿ, ಕೇಳಿರಿ, ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸವಿಾಪಿ ಸಲು ಬರಹೇಳಿರಿ ಎಂದು ಕೂಗಿ ಬೇಡಿಕೊಂಡಳು. ಅವನು ಸವಿಾಪ ಬಂದಾಗ ಆ ಸ್ತ್ರೀಯು--ನೀನು ಯೋವಾಬನೋ ಅಂದಳು. ಅವನು--ನಾನೇ ಅಂದನು. ಅವಳು ಅವನಿಗೆ--ನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು. ಅವನು--ನಾನು ಕೇಳುತ್ತೇನೆ ಅಂದನು. ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು. ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು. ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ. ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು. ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
- Romans 16:2–4 ರೋಮಾಪುರದವರಿಗೆ 16:2–4ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ. ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
- 2 John 1:1 2 ಯೋಹಾನನು 1:1ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.