Proverbs · chapter 11 · verse 17
Proverbs 11:17 in Kannada
ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
Karuneyullavanu tanna praanakke olledannu maadikolluttaane; kathoriyu tanna shareeravannu baadhisikolluttaane.
Proverbs 11:17 in English
- King James Version (KJV)
- The merciful man doeth good to his own soul: but [he that is] cruel troubleth his own flesh.
- World English Bible (WEB)
- The merciful man does good to his own soul, but he who is cruel troubles his own flesh.
- American Standard Version (ASV)
- The merciful man doeth good to his own soul; But he that is cruel troubleth his own flesh.
- Bible in Basic English (BBE)
- The man who has mercy will be rewarded, but the cruel man is the cause of trouble to himself.
- Darby Translation (DBY)
- The merciful man doeth good to his own soul; but the cruel troubleth his own flesh.
- Webster's Bible (WBS)
- The merciful man doeth good to his own soul: but [he that is] cruel troubleth his own flesh.
- Young's Literal Translation (YLT)
- A kind man is rewarding his own soul, And the fierce is troubling his own flesh.
Read in context
- 15ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ; ಹೊಣೆಗಾರತ್ವವನ್ನು ಹಗೆಮಾಡಿ ಕೊಳ್ಳುವವನು ಭದ್ರವಾಗಿರುವನು.
- 16ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ.
- 17ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
- 18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
- 19ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
Cross references
- Matthew 5:7 ಮತ್ತಾಯನು 5:7ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.
- Matthew 25:34–40 ಮತ್ತಾಯನು 25:34–40ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Psalm 41:1–4 ಕೀರ್ತನೆಗಳು 41:1–4ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು. ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ. ಹಾಸಿಗೆಯ ಮೇಲೆ ಕ್ಷೀಣಿಸುವ ವನನ್ನು ಕರ್ತನು ಬಲಪಡಿಸುವನು. ನೀನು ಅವನ ರೋಗದಲ್ಲಿ ಹಾಸಿಗೆಯನ್ನು ಸರಿಮಾಡುವಿ. ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
- Matthew 6:14–15 ಮತ್ತಾಯನು 6:14–15ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು. ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
- Daniel 4:27 ದಾನಿಯೇಲನು 4:27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
- James 5:1–5 ಯಾಕೋಬನು 5:1–5ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ. ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- Philippians 4:17 ಫಿಲಿಪ್ಪಿಯವರಿಗೆ 4:17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
- 2 Corinthians 9:6–14 2 ಕೊರಿಂಥದವರಿಗೆ 9:6–14ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು. ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು. ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು. ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
- Isaiah 58:7–12 ಯೆಶಾಯ 58:7–12ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ. ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- Luke 6:38 ಲೂಕನು 6:38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- Proverbs 15:27 ಜ್ಞಾನೋಕ್ತಿಗಳು 15:27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.