Proverbs · chapter 11 · verse 18
Proverbs 11:18 in Kannada
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
Dushtanu mosada krutyavannu maaduttaane; neetiyannu bittuvavanige nissandeha vaagi bahumaanaviruvadu.
Proverbs 11:18 in English
- King James Version (KJV)
- The wicked worketh a deceitful work: but to him that soweth righteousness [shall be] a sure reward.
- World English Bible (WEB)
- Wicked people earn deceitful wages, but one who sows righteousness reaps a sure reward.
- American Standard Version (ASV)
- The wicked earneth deceitful wages; But he that soweth righteousness [hath] a sure reward.
- Bible in Basic English (BBE)
- The sinner gets the payment of deceit; but his reward is certain who puts in the seed of righteousness.
- Darby Translation (DBY)
- The wicked worketh a deceitful work; but he that soweth righteousness hath a sure reward.
- Webster's Bible (WBS)
- The wicked worketh a deceitful work: but to him that soweth righteousness [shall be] a sure reward.
- Young's Literal Translation (YLT)
- The wicked is getting a lying wage, And whoso is sowing righteousness — a true reward.
Read in context
- 16ಕೃಪೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಕಾಪಾಡಿಕೊಳ್ಳುತ್ತಾಳೆ. ಬಲಿಷ್ಠರು ಐಶ್ವರ್ಯವನ್ನು ಕಾಪಾಡಿಕೊಳ್ಳುತ್ತಾರೆ.
- 17ಕರುಣೆಯುಳ್ಳವನು ತನ್ನ ಪ್ರಾಣಕ್ಕೆ ಒಳ್ಳೇದನ್ನು ಮಾಡಿಕೊಳ್ಳುತ್ತಾನೆ; ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
- 18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
- 19ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
- 20ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
Cross references
- Galatians 6:8–9 ಗಲಾತ್ಯದವರಿಗೆ 6:8–9ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- Ecclesiastes 10:8 ಪ್ರಸಂಗಿ 10:8ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
- Hosea 10:12–13 ಹೋಶೇಯ 10:12–13ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ. ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
- James 3:18 ಯಾಕೋಬನು 3:18ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Psalm 126:5–6 ಕೀರ್ತನೆಗಳು 126:5–6ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು. ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
- Proverbs 22:8 ಜ್ಞಾನೋಕ್ತಿಗಳು 22:8ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
- Proverbs 1:18 ಜ್ಞಾನೋಕ್ತಿಗಳು 1:18ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
- Proverbs 5:22 ಜ್ಞಾನೋಕ್ತಿಗಳು 5:22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Isaiah 59:5–8 ಯೆಶಾಯ 59:5–8ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು. ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ. ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ. ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
- Job 27:13–23 ಯೋಬನು 27:13–23ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ. ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು. ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು. ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ. ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ. ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ. ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ. ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ. ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ. ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
- Ephesians 4:22 ಎಫೆಸದವರಿಗೆ 4:22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.