Proverbs · chapter 11 · verse 20
Proverbs 11:20 in Kannada
ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
Moorkha hrudayavullavaru kartanige asahyavaadavaru; tamma maargadalli yathaarthavaagi iruvavaru aatana aanandavaagi ddaare.
Proverbs 11:20 in English
- King James Version (KJV)
- They that are of a froward heart [are] abomination to the LORD: but [such as are] upright in [their] way [are] his delight.
- World English Bible (WEB)
- Those who are perverse in heart are an abomination to the LORD, but those whose ways are blameless are his delight.
- American Standard Version (ASV)
- They that are perverse in heart are an abomination to Jehovah; But such as are perfect in [their] way are his delight.
- Bible in Basic English (BBE)
- The uncontrolled are hated by the Lord, but those whose ways are without error are his delight
- Darby Translation (DBY)
- The perverse in heart are abomination to Jehovah; but they that are perfect in [their] way are his delight.
- Webster's Bible (WBS)
- They that are of a froward heart [are] abomination to the LORD: but [such as are] upright in [their] way [are] his delight.
- Young's Literal Translation (YLT)
- An abomination to Jehovah [are] the perverse of heart, And the perfect of the way [are] His delight.
Read in context
- 18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
- 19ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
- 20ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
- 21ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
- 22ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು.
Cross references
- Psalm 119:1 ಕೀರ್ತನೆಗಳು 119:1ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.
- 1 Chronicles 29:17 1 ಪೂರ್ವಕಾಲವೃತ್ತಾಂತ 29:17ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
- Psalm 140:13 ಕೀರ್ತನೆಗಳು 140:13ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
- Proverbs 21:29 ಜ್ಞಾನೋಕ್ತಿಗಳು 21:29ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ.
- Proverbs 8:13 ಜ್ಞಾನೋಕ್ತಿಗಳು 8:13ಕರ್ತನ ಭಯವು ದುಷ್ಟತ್ವವನ್ನು ಹಗೆಮಾಡುವದು; ಗರ್ವ ಅಹಂಭಾವ ಕೆಟ್ಟದಾರಿ ಮೂರ್ಖನಬಾಯಿ ಇವುಗಳನ್ನು ನಾನು ಹಗೆಮಾಡು ತ್ತೇನೆ.
- Psalm 51:6 ಕೀರ್ತನೆಗಳು 51:6ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
- Psalm 18:25–26 ಕೀರ್ತನೆಗಳು 18:25–26ನೀನು ಕರುಣೆಯು ಳ್ಳವನಿಗೆ ಕರುಣೆಯನ್ನು ತೋರಿಸುವಿ; ಸಂಪೂರ್ಣ ನಾದ ಮನುಷ್ಯನಿಗೆ ಸಂಪೂರ್ಣನಾಗಿರುವಿ. ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
- Psalm 11:7 ಕೀರ್ತನೆಗಳು 11:7ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Proverbs 6:14 ಜ್ಞಾನೋಕ್ತಿಗಳು 6:14ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Proverbs 6:16–19 ಜ್ಞಾನೋಕ್ತಿಗಳು 6:16–19ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ: ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು, ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು, ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.
- Proverbs 16:17 ಜ್ಞಾನೋಕ್ತಿಗಳು 16:17ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.