Proverbs · chapter 11 · verse 24
Proverbs 11:24 in Kannada
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
Chadurisidaagyoo vruddhiyaaguttade; bekaadaddakkinta hechchinadannu bigihidiyuvanthaddu badatanakke nadisuttade.
Proverbs 11:24 in English
- King James Version (KJV)
- There is that scattereth, and yet increaseth; and [there is] that withholdeth more than is meet, but [it tendeth] to poverty.
- World English Bible (WEB)
- There is one who scatters, and increases yet more. There is one who withholds more than is appropriate, but gains poverty.
- American Standard Version (ASV)
- There is that scattereth, and increaseth yet more; And there is that withholdeth more than is meet, but [it tendeth] only to want.
- Bible in Basic English (BBE)
- A man may give freely, and still his wealth will be increased; and another may keep back more than is right, but only comes to be in need.
- Darby Translation (DBY)
- There is that scattereth, and yet increaseth; and there is that withholdeth more than is right, but [it tendeth] only to want.
- Webster's Bible (WBS)
- There is that scattereth, and yet increaseth; and [there is] that withholdeth more than is meet, but [it tendeth] to poverty.
- Young's Literal Translation (YLT)
- There is who is scattering, and yet is increased, And who is keeping back from uprightness, only to want.
Read in context
- 22ಹಂದಿಯ ಮೂಗಿನಲ್ಲಿರುವ ಬಂಗಾರದ ಒಡವೆಯು ಹೇಗೋ ಹಾಗೆಯೇ ವಿವೇಕವಿಲ್ಲದ ಸುಂದರವಾದ ಸ್ತ್ರೀಯು ಇರುವಳು.
- 23ನೀತಿವಂತರು ಒಳ್ಳೇಯದನ್ನು ಮಾತ್ರ ಅಪೇಕ್ಷಿಸುತ್ತಾರೆ; ದುಷ್ಟರ ಅಪೇಕ್ಷೆಯು ಕೋಪ ವಾಗಿದೆ.
- 24ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
- 25ಉದಾರಿಯು ಪುಷ್ಠನಾಗು ವನು; ನೀರು ಹಾಯಿಸುವವನಿಗೆ ನೀರು ದೊರೆಯು ವದು.
- 26ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
Cross references
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Luke 6:38 ಲೂಕನು 6:38ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- Deuteronomy 15:10 ಧರ್ಮೋಪದೇಶಕಾಂಡ 15:10ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Ecclesiastes 11:6 ಪ್ರಸಂಗಿ 11:6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
- Haggai 1:6 ಹಗ್ಗಾಯ 1:6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- Haggai 1:9–11 ಹಗ್ಗಾಯ 1:9–11ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ? ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ. ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
- 2 Corinthians 9:5–11 2 ಕೊರಿಂಥದವರಿಗೆ 9:5–11ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು. ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ. ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. (ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ. ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
- Proverbs 11:18 ಜ್ಞಾನೋಕ್ತಿಗಳು 11:18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
- Haggai 2:16–19 ಹಗ್ಗಾಯ 2:16–19ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ. ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ. ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ. ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- Proverbs 28:8 ಜ್ಞಾನೋಕ್ತಿಗಳು 28:8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
- Acts 11:29–30 ಅಪೊಸ್ತಲರ ಕೃತ್ಯಗಳು 11:29–30ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು. ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.