Proverbs · chapter 11 · verse 30
Proverbs 11:30 in Kannada
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
Neetivantara phalavu jeevavruksha; aatmagalannu gellu vavanu jnyaaniyaagiddaane.igo, bhoomiya mele neetivantaru pratiphalavannu honduvaru; dushtanoo paapiyoo eshto hechchaagi pratiphala vannu honduttaare.
Proverbs 11:30 in English
- King James Version (KJV)
- The fruit of the righteous [is] a tree of life; and he that winneth souls [is] wise.
- World English Bible (WEB)
- The fruit of the righteous is a tree of life. He who is wise wins souls.
- American Standard Version (ASV)
- The fruit of the righteous is a tree of life; And he that is wise winneth souls.
- Bible in Basic English (BBE)
- The fruit of righteousness is a tree of life, but violent behaviour takes away souls.
- Darby Translation (DBY)
- The fruit of the righteous is a tree of life; and the wise winneth souls.
- Webster's Bible (WBS)
- The fruit of the righteous [is] a tree of life; and he that winneth souls [is] wise.
- Young's Literal Translation (YLT)
- The fruit of the righteous [is] a tree of life, And whoso is taking souls [is] wise.
Read in context
- 28ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
- 29ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಜ್ಞಾನವುಳ್ಳ ಹೃದಯದವನಿಗೆ ಅವಿವೇಕಿಯು ಸೇವಕನಾಗಿರುವನು.
- 30ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- 31ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
Cross references
- Daniel 12:3 ದಾನಿಯೇಲನು 12:3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- James 5:20 ಯಾಕೋಬನು 5:20ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
- 1 Corinthians 9:19–23 1 ಕೊರಿಂಥದವರಿಗೆ 9:19–23ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ. ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
- Proverbs 3:18 ಜ್ಞಾನೋಕ್ತಿಗಳು 3:18ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- 1 Thessalonians 2:19 1 ಥೆಸಲೊನೀಕದವರಿಗೆ 2:19ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
- John 4:36 ಯೋಹಾನನು 4:36ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು.
- Luke 5:9–10 ಲೂಕನು 5:9–10ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು. ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
- Matthew 4:19 ಮತ್ತಾಯನು 4:19ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
- Proverbs 15:4 ಜ್ಞಾನೋಕ್ತಿಗಳು 15:4ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.