Proverbs · chapter 12 · verse 15
Proverbs 12:15 in Kannada
ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
Avivekiya maarga vu tanna kannugalige nettagaagide; aalochanege kivigoduvavanu jnyaaniyaagiddaane.
Proverbs 12:15 in English
- King James Version (KJV)
- The way of a fool [is] right in his own eyes: but he that hearkeneth unto counsel [is] wise.
- World English Bible (WEB)
- The way of a fool is right in his own eyes, but he who is wise listens to counsel.
- American Standard Version (ASV)
- The way of a fool is right in his own eyes; But he that is wise hearkeneth unto counsel.
- Bible in Basic English (BBE)
- The way of the foolish man seems right to him? but the wise man gives ear to suggestions.
- Darby Translation (DBY)
- The way of a fool is right in his own eyes; but he that is wise hearkeneth unto counsel.
- Webster's Bible (WBS)
- The way of a fool [is] right in his own eyes: but he that hearkeneth to counsel [is] wise.
- Young's Literal Translation (YLT)
- The way of a fool [is] right in his own eyes, And whoso is hearkening to counsel [is] wise.
Read in context
- 13ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
- 14ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದ ರಿಂದ ತೃಪ್ತನಾಗುವನು; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- 15ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
- 16ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
- 17ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
Cross references
- Proverbs 3:7 ಜ್ಞಾನೋಕ್ತಿಗಳು 3:7ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
- Proverbs 26:12 ಜ್ಞಾನೋಕ್ತಿಗಳು 26:12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
- Proverbs 19:20 ಜ್ಞಾನೋಕ್ತಿಗಳು 19:20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
- Proverbs 14:16 ಜ್ಞಾನೋಕ್ತಿಗಳು 14:16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
- Proverbs 14:12 ಜ್ಞಾನೋಕ್ತಿಗಳು 14:12ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
- Proverbs 16:2 ಜ್ಞಾನೋಕ್ತಿಗಳು 16:2ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
- Proverbs 16:25 ಜ್ಞಾನೋಕ್ತಿಗಳು 16:25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
- Proverbs 9:9 ಜ್ಞಾನೋಕ್ತಿಗಳು 9:9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- Proverbs 1:5 ಜ್ಞಾನೋಕ್ತಿಗಳು 1:5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- Galatians 6:3 ಗಲಾತ್ಯದವರಿಗೆ 6:3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- Proverbs 21:2 ಜ್ಞಾನೋಕ್ತಿಗಳು 21:2ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ.
- Jeremiah 38:15–28 ಯೆರೆಮೀಯ 38:15–28ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು. ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು. ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ. ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು. ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು. ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ-- ಇಗೋ, ಯೆಹೂದದ ಅರಸನ ಮನೆ ಯಲ್ಲಿ ಉಳಿದ ಹೆಂಗಸರೆಲ್ಲರು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ತರಲ್ಪಟ್ಟು ಹೇಳುವದೇ ನಂದರೆ--ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ; ನಿನ್ನ ಕಾಲುಗಳು ಕೆಸರಿನಲ್ಲಿ ಮುಳುಗಿವೆ; ಆದರೆ ಅವರು ಹಿಂಜರಿದಿದ್ದಾರೆ. ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು. ಆಗ ಚಿದ್ಕೀಯನು ಯೆರೆವಿಾಯನಿಗೆ ಹೇಳಿದ್ದೇನಂದರೆ--ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು. ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿ ದ್ದೇನೆಂದು ಕೇಳಿ ನಿನ್ನ ಬಳಿಗೆ ಬಂದು--ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು; ನಾವು ನಿನ್ನನ್ನು ಕೊಂದುಹಾಕುವದಿಲ್ಲ; ಅರಸನು ನಿನ್ನ ಸಂಗಡ ಮಾತಾ ಡಿದ್ದನ್ನು ಸಹ ತಿಳಿಸು ಎಂದು ಹೇಳಿದರೆ-- ನೀನು ಅವರಿಗೆ--ನನ್ನನ್ನು ತಿರುಗಿ ಯೋನಾತಾನನ ಮನೆಯಲ್ಲಿ ಸಾಯುವ ಹಾಗೆ ತಕ್ಕೊಂಡು ಹೋಗ ಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು ಅಂದನು. ಆಗ ಪ್ರಧಾನರೆಲ್ಲರೂ ಯೆರೆವಿಾಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು; ಆಗ ಅವರು ಸುಮ್ಮನಾದರು; ಆ ಕಾರ್ಯದ ವಿಷಯ ವನ್ನು ಅವರು ಗ್ರಹಿಸಲಿಲ್ಲ.ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು. ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.