Proverbs · chapter 12 · verse 20
Proverbs 12:20 in Kannada
ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
Kedannu kalpisuvavara hrudayadalli mosa; samaadhaanada aalochaneyannu heluvavarige santosha.
Proverbs 12:20 in English
- King James Version (KJV)
- Deceit [is] in the heart of them that imagine evil: but to the counsellors of peace [is] joy.
- World English Bible (WEB)
- Deceit is in the heart of those who plot evil, but joy comes to the promoters of peace.
- American Standard Version (ASV)
- Deceit is in the heart of them that devise evil; But to the counsellors of peace is joy.
- Bible in Basic English (BBE)
- Deceit is in the heart of those whose designs are evil, but for those purposing peace there is joy.
- Darby Translation (DBY)
- Deceit is in the heart of them that devise evil; but to the counsellors of peace is joy.
- Webster's Bible (WBS)
- Deceit [is] in the heart of them that imagine evil: but to the counselors of peace [is] joy.
- Young's Literal Translation (YLT)
- Deceit [is] in the heart of those devising evil, And to those counselling peace [is] joy.
Read in context
- 18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- 19ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
- 20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
- 21ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.
- 22ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
Cross references
- Matthew 5:9 ಮತ್ತಾಯನು 5:9ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
- 1 Peter 3:8–13 1 ಪೇತ್ರನು 3:8–13ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ. ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ. ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ. ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ. ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ. ನೀವು ಒಳ್ಳೇದನ್ನು ಅನುಸರಿಸುವವರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?
- Mark 7:21–22 ಮಾರ್ಕನು 7:21–22ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
- Proverbs 26:24–26 ಜ್ಞಾನೋಕ್ತಿಗಳು 26:24–26ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ. ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
- Jeremiah 17:16 ಯೆರೆಮೀಯ 17:16ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
- Zechariah 6:13 ಜೆಕರ್ಯ 6:13ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
- Proverbs 12:12 ಜ್ಞಾನೋಕ್ತಿಗಳು 12:12ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Romans 1:29 ರೋಮಾಪುರದವರಿಗೆ 1:29ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
- Mark 12:14–17 ಮಾರ್ಕನು 12:14–17ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ? ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು. ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು. ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.