Proverbs · chapter 12 · verse 26
Proverbs 12:26 in Kannada
ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
Neeti vantanu tanna nereyavaniginta shreshthanaagiddaane; dushtara maargavu avarannu tappu daarige ele yuttade.
Proverbs 12:26 in English
- King James Version (KJV)
- The righteous [is] more excellent than his neighbour: but the way of the wicked seduceth them.
- World English Bible (WEB)
- A righteous person is cautious in friendship, but the way of the wicked leads them astray.
- American Standard Version (ASV)
- The righteous is a guide to his neighbor; But the way of the wicked causeth them to err.
- Bible in Basic English (BBE)
- The upright man is a guide to his neighbour, but the way of evil-doers is a cause of error to them.
- Darby Translation (DBY)
- The righteous guideth his neighbour; but the way of the wicked misleadeth them.
- Webster's Bible (WBS)
- The righteous [is] more excellent than his neighbor: but the way of the wicked seduceth them.
- Young's Literal Translation (YLT)
- The righteous searcheth his companion, And the way of the wicked causeth them to err.
Read in context
- 24ಚುರುಕು ಕೈಯುಳ್ಳವನು ಆಳುವನು, ಸೋಮಾರಿ ಗಳು ಕಪ್ಪಕೊಡುವವರಾಗುವರು.
- 25ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು.
- 26ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
- 27ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
- 28ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
Cross references
- 1 John 2:26 1 ಯೋಹಾನನು 2:26ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ.
- James 1:13–14 ಯಾಕೋಬನು 1:13–14ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ. ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
- Proverbs 17:27 ಜ್ಞಾನೋಕ್ತಿಗಳು 17:27ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
- Psalm 18:12–13 ಕೀರ್ತನೆಗಳು 18:12–13ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು. ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
- Matthew 5:46–48 ಮತ್ತಾಯನು 5:46–48ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ? ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ. ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- 2 Peter 2:18–22 2 ಪೇತ್ರನು 2:18–22ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ. ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Luke 6:32–36 ಲೂಕನು 6:32–36ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ. ನಿಮಗೆ ಒಳ್ಳೇದನ್ನು ಮಾಡು ವವರಿಗೆ ನೀವು ಒಳ್ಳೇದನ್ನು ಮಾಡಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಅದರಂತೆಯೇ ಮಾಡುತ್ತಾರೆ. ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ. ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ, ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.
- Proverbs 12:13 ಜ್ಞಾನೋಕ್ತಿಗಳು 12:13ತನ್ನ ತುಟಿಗಳ ದೋಷದಿಂದ ದುಷ್ಟನು ಉರ್ಲಿಗೆ ಬೀಳುವನು; ನೀತಿವಂತರು ಇಕ್ಕಟ್ಟಿ ನೊಳಗಿಂದ ತಪ್ಪಿಸಿಕೊಳ್ಳುವರು.
- 1 Peter 2:18–21 1 ಪೇತ್ರನು 2:18–21ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ. ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ. ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Revelation 13:14 ಪ್ರಕಟನೆ 13:14ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.