Proverbs · chapter 12 · verse 28
Proverbs 12:28 in Kannada
ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
Neetiya maargadalli jeeva vide; adara daariyalli maranave illa.
Proverbs 12:28 in English
- King James Version (KJV)
- In the way of righteousness [is] life; and [in] the pathway [thereof there is] no death.
- World English Bible (WEB)
- In the way of righteousness is life; in its path there is no death.
- American Standard Version (ASV)
- In the way of righteousness is life; And in the pathway thereof there is no death.
- Bible in Basic English (BBE)
- In the road of righteousness is life, but the way of the evil-doer goes to death.
- Darby Translation (DBY)
- In the path of righteousness is life, and in the pathway thereof there is no death.
- Webster's Bible (WBS)
- In the way of righteousness [is] life; and [in] the path [of it there is] no death.
- Young's Literal Translation (YLT)
- In the path of righteousness [is] life, And in the way of [that] path [is] no death!
Read in context
- 26ನೀತಿ ವಂತನು ತನ್ನ ನೆರೆಯವನಿಗಿಂತ ಶ್ರೇಷ್ಠನಾಗಿದ್ದಾನೆ; ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆ ಯುತ್ತದೆ.
- 27ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವದಿಲ್ಲ; ಆದರೆ ಶ್ರದ್ಧೆಯುಳ್ಳವನ ಆಸ್ತಿಯು ಅಮೂಲ್ಯವಾಗಿದೆ.ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
- 28ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
Cross references
- 3 John 1:11 3 ಯೋಹಾನನು 1:11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- Romans 5:21 ರೋಮಾಪುರದವರಿಗೆ 5:21ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Ezekiel 18:20–24 ಯೆಹೆಜ್ಕೇಲನು 18:20–24ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು. ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು. ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು. ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ? ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
- Proverbs 11:19 ಜ್ಞಾನೋಕ್ತಿಗಳು 11:19ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
- Titus 2:11–12 ತೀತನಿಗೆ 2:11–12ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- Ezekiel 18:9 ಯೆಹೆಜ್ಕೇಲನು 18:9ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.
- Deuteronomy 30:15 ಧರ್ಮೋಪದೇಶಕಾಂಡ 30:15ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.
- 1 John 2:29 1 ಯೋಹಾನನು 2:29ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.
- 1 John 3:7 1 ಯೋಹಾನನು 3:7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
- Proverbs 8:35 ಜ್ಞಾನೋಕ್ತಿಗಳು 8:35ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಕರ್ತನ ದಯವನ್ನು ಹೊಂದುವನು.ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
- Proverbs 10:16 ಜ್ಞಾನೋಕ್ತಿಗಳು 10:16ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
- Romans 6:22–23 ರೋಮಾಪುರದವರಿಗೆ 6:22–23ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು. ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.