Proverbs · chapter 12 · verse 4
Proverbs 12:4 in Kannada
ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
Gunavatiyaada streeyu tanna patige kireeta; naachikepadisuvavalu avana elubugalige kole yuvikeyante iruvalu.
Proverbs 12:4 in English
- King James Version (KJV)
- A virtuous woman [is] a crown to her husband: but she that maketh ashamed [is] as rottenness in his bones.
- World English Bible (WEB)
- A worthy woman is the crown of her husband, but a disgraceful wife is as rottenness in his bones.
- American Standard Version (ASV)
- A worthy woman is the crown of her husband; But she that maketh ashamed is as rottenness in his bones.
- Bible in Basic English (BBE)
- A woman of virtue is a crown to her husband; but she whose behaviour is a cause of shame is like a wasting disease in his bones.
- Darby Translation (DBY)
- A woman of worth is a crown to her husband; but she that maketh ashamed is as rottenness in his bones.
- Webster's Bible (WBS)
- A virtuous woman [is] a crown to her husband: but she that maketh ashamed [is] as rottenness in his bones.
- Young's Literal Translation (YLT)
- A virtuous woman [is] a crown to her husband, And as rottenness in his bones [is] one causing shame.
Read in context
- 2ಒಳ್ಳೆ ಯವನು ಕರ್ತನ ದಯೆಯನ್ನು ಹೊಂದುತ್ತಾನೆ; ಕುಯುಕ್ತಿ ಮಾಡುವವನನ್ನು ಆತನು ದುಷ್ಟನೆಂದು ಖಂಡಿಸುತ್ತಾನೆ.
- 3ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
- 4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
- 5ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
- 6ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
Cross references
- Proverbs 31:10–25 ಜ್ಞಾನೋಕ್ತಿಗಳು 31:10–25ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ. ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ. ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು. ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ. ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ. ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ. ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ. ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ. ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು. ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ. ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ. ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ. ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ. ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು. ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ. ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು.
- Proverbs 14:1 ಜ್ಞಾನೋಕ್ತಿಗಳು 14:1ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
- Proverbs 14:30 ಜ್ಞಾನೋಕ್ತಿಗಳು 14:30ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
- Proverbs 19:13–14 ಜ್ಞಾನೋಕ್ತಿಗಳು 19:13–14ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು. ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- Proverbs 21:19 ಜ್ಞಾನೋಕ್ತಿಗಳು 21:19ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು.
- Proverbs 21:9 ಜ್ಞಾನೋಕ್ತಿಗಳು 21:9ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು.
- 1 Corinthians 11:11 1 ಕೊರಿಂಥದವರಿಗೆ 11:11ಆದರೂ ಕರ್ತನಲ್ಲಿ ಸ್ತ್ರೀಯಿಲ್ಲದೆ ಪುರುಷನೂ ಪುರುಷನಿಲ್ಲದೆ ಸ್ತ್ರೀಯೂ ಇಲ್ಲ.
- Proverbs 27:15–16 ಜ್ಞಾನೋಕ್ತಿಗಳು 27:15–16ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ. ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ.
- 1 Corinthians 11:7 1 ಕೊರಿಂಥದವರಿಗೆ 11:7ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ.
- Habakkuk 3:16 ಹಬಕ್ಕೂಕ 3:16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.