Proverbs · chapter 12 · verse 6
Proverbs 12:6 in Kannada
ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
Dushtara maatugalu raktakkaagi honchu haakuttave; yathaarthavantara baayiyu avarannu bidisuvadu.
Proverbs 12:6 in English
- King James Version (KJV)
- The words of the wicked [are] to lie in wait for blood: but the mouth of the upright shall deliver them.
- World English Bible (WEB)
- The words of the wicked are about lying in wait for blood, but the speech of the upright rescues them.
- American Standard Version (ASV)
- The words of the wicked are of lying in wait for blood; But the mouth of the upright shall deliver them.
- Bible in Basic English (BBE)
- The words of sinners are destruction for the upright; but the mouth of upright men is their salvation.
- Darby Translation (DBY)
- The words of the wicked are a lying-in-wait for blood; but the mouth of the upright shall deliver them.
- Webster's Bible (WBS)
- The words of the wicked [are] to lie in wait for blood: but the mouth of the upright shall deliver them.
- Young's Literal Translation (YLT)
- The words of the wicked [are]: 'Lay wait for blood,' And the mouth of the upright delivereth them.
Read in context
- 4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
- 5ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
- 6ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
- 7ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
- 8ತನ್ನ ಜ್ಞಾನಕ್ಕನುಸಾರವಾಗಿ ಒಬ್ಬ ಮನುಷ್ಯನು ಹೊಗ ಳಲ್ಪಡುವನು; ವಕ್ರಹೃದಯವುಳ್ಳವನು ತಿರಸ್ಕರಿಸಲ್ಪಡು ವನು.
Cross references
- Proverbs 14:3 ಜ್ಞಾನೋಕ್ತಿಗಳು 14:3ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
- Jeremiah 5:26 ಯೆರೆಮೀಯ 5:26ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
- Proverbs 1:11–19 ಜ್ಞಾನೋಕ್ತಿಗಳು 1:11–19ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ. ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ. ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ. ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- Isaiah 59:7 ಯೆಶಾಯ 59:7ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
- Esther 7:4–6 ಎಸ್ತೇರಳು 7:4–6ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು. ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು. ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
- 2 Samuel 17:1–4 2 ಸಮುವೇಲನು 17:1–4ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು. ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು. ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು. ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.
- Acts 23:12 ಅಪೊಸ್ತಲರ ಕೃತ್ಯಗಳು 23:12ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
- Esther 4:7–14 ಎಸ್ತೇರಳು 4:7–14ಆಗ ಮೊರ್ದೆಕೈ ತನಗೆ ಆದದ್ದನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡುವ ನಿಮಿತ್ತ ಅರಸನ ಬೊಕ್ಕಸಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣ ವನ್ನೂ ಅವನಿಗೆ ತಿಳಿಸಿದನು. ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು. ಆಗ ಹತಾಕನು ಬಂದು ಮೊರ್ದೆಕೈಯ ಮಾತು ಗಳನ್ನು ಎಸ್ತೇರಳಿಗೆ ತಿಳಿಸಿದನು. ಎಸ್ತೇರಳು ಮೊರ್ದೆ ಕೈಗೆ ಹೇಳಲು ಹತಾಕನಿಗೆ ಆಜ್ಞಾಪಿಸಿದ್ದೇನಂದರೆ-- ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ ಅವರು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದರು. ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ. ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
- Acts 23:15 ಅಪೊಸ್ತಲರ ಕೃತ್ಯಗಳು 23:15ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ