Proverbs · chapter 13 · verse 1
Proverbs 13:1 in Kannada
ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
Jnyaaniyaada maganu tanna tandeya bodhaneyannu keluttaane; tiraskarisu vavanu gadarikeyannu keluvadilla.
Proverbs 13:1 in English
- King James Version (KJV)
- A wise son [heareth] his father’s instruction: but a scorner heareth not rebuke.
- World English Bible (WEB)
- A wise son listens to his father’s instruction, but a scoffer doesn’t listen to rebuke.
- American Standard Version (ASV)
- A wise son [heareth] his father’s instruction; But a scoffer heareth not rebuke.
- Bible in Basic English (BBE)
- A wise son is a lover of teaching, but the ears of the haters of authority are shut to sharp words.
- Darby Translation (DBY)
- A wise son [heareth] his father's instruction; but a scorner heareth not rebuke.
- Webster's Bible (WBS)
- A wise son [heareth] his father's instruction: but a scorner heareth not rebuke.
- Young's Literal Translation (YLT)
- A wise son — the instruction of a father, And a scorner — he hath not heard rebuke.
Read in context
- 1ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ.
- 2ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.
- 3ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
Cross references
- Proverbs 15:5 ಜ್ಞಾನೋಕ್ತಿಗಳು 15:5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
- Proverbs 9:7–8 ಜ್ಞಾನೋಕ್ತಿಗಳು 9:7–8ಪರಿಹಾಸ್ಯಮಾಡುವವನನ್ನು ಗದರಿಸುವವನು ತನಗೆ ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು. ಪರಿಹಾಸ್ಯಮಾಡುವವನು ನಿನ್ನನ್ನು ಹಗೆಮಾಡದಂತೆ ಅವನನ್ನು ಗದರಿಸಬೇಡ. ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.
- Proverbs 15:20 ಜ್ಞಾನೋಕ್ತಿಗಳು 15:20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
- Proverbs 4:1–14 ಜ್ಞಾನೋಕ್ತಿಗಳು 4:1–14ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ. ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ. ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ. ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು. ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ. ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು. ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ. ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು. ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು. ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು. ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು. ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ. ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ. ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
- Proverbs 10:1 ಜ್ಞಾನೋಕ್ತಿಗಳು 10:1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- 1 Samuel 2:25 1 ಸಮುವೇಲನು 2:25ಮನು ಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ ನ್ಯಾಯಾಧಿಪತಿಗಳು ಅವನಿಗೆ ನ್ಯಾಯತೀರಿಸುವರು.ಒಬ್ಬನು ಕರ್ತನಿಗೆ ವಿರೋಧವಾಗಿ ಪಾಪಮಾಡಿದರೆ ಅವನಿಗೋಸ್ಕರ ಪ್ರಾರ್ಥನೆ ಮಾಡತಕ್ಕವನು ಯಾರು ಅಂದನು. ಆದರೆ ಕರ್ತನು ಅವರನ್ನು ಕೊಂದುಹಾಕ ಬೇಕೆಂದಿದ್ದನಷ್ಟೆ, ಅವರು ತಮ್ಮ ತಂದೆಯ ಮಾತನ್ನು ಕೇಳದೆಹೋದರು.
- Isaiah 28:14–15 ಯೆಶಾಯ 28:14–15ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ, ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- Proverbs 4:20–22 ಜ್ಞಾನೋಕ್ತಿಗಳು 4:20–22ನನ್ನ ಮಗನೇ, ನನ್ನ ಮಾತುಗಳನ್ನು ಆಲಿಸು; ನನ್ನ ನುಡಿಗಳಿಗೆ ಕಿವಿಗೊಡು. ಅವುಗಳು ನಿನ್ನ ಕಣ್ಣುಗಳಿಗೆ ತಪ್ಪಿಹೋಗದೆ ಇರಲಿ; ಅವುಗಳನ್ನು ನಿನ್ನ ಹೃದಯದ ಮಧ್ಯದಲ್ಲಿ ಇಟ್ಟುಕೋ. ಅವುಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ ಅವರ ದೇಹ ಕ್ಕೆಲ್ಲಾ ಆರೋಗ್ಯವೂ ಆಗಿವೆ.
- Proverbs 14:6 ಜ್ಞಾನೋಕ್ತಿಗಳು 14:6ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.