Proverbs · chapter 13 · verse 18
Proverbs 13:18 in Kannada
ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
Bodhaneyannu tiraskarisuvavanige badatanavoo avamaanavoo baruvavu.; gadarikeyannu gamanisu vavanu sanmaanahonduvanu.
Proverbs 13:18 in English
- King James Version (KJV)
- Poverty and shame [shall be to] him that refuseth instruction: but he that regardeth reproof shall be honoured.
- World English Bible (WEB)
- Poverty and shame come to him who refuses discipline, but he who heeds correction shall be honored.
- American Standard Version (ASV)
- Poverty and shame [shall be to] him that refuseth correction; But he that regardeth reproof shall be honored.
- Bible in Basic English (BBE)
- Need and shame will be the fate of him who is uncontrolled by training; but he who takes note of teaching will be honoured.
- Darby Translation (DBY)
- Poverty and shame shall be [to] him that refuseth instruction; but he that regardeth reproof shall be honoured.
- Webster's Bible (WBS)
- Poverty and shame [shall be to] him that refuseth instruction: but he that regardeth reproof shall be honored.
- Young's Literal Translation (YLT)
- Whoso is refusing instruction — poverty and shame, And whoso is observing reproof is honoured.
Read in context
- 16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.
- 17ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
- 18ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
- 19ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
- 20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
Cross references
- Proverbs 15:5 ಜ್ಞಾನೋಕ್ತಿಗಳು 15:5ತನ್ನ ತಂದೆಯ ಬೋಧನೆಯನ್ನು ಬುದ್ಧಿಹೀನನು ತಿರಸ್ಕರಿಸುತ್ತಾನೆ. ವಿವೇಕಿಯು ಗದರಿಕೆಯನ್ನು ಲಕ್ಷಿಸುವನು;
- Proverbs 15:31–32 ಜ್ಞಾನೋಕ್ತಿಗಳು 15:31–32ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ. ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- Proverbs 12:1 ಜ್ಞಾನೋಕ್ತಿಗಳು 12:1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
- Proverbs 13:13 ಜ್ಞಾನೋಕ್ತಿಗಳು 13:13ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
- Proverbs 25:12 ಜ್ಞಾನೋಕ್ತಿಗಳು 25:12ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
- Proverbs 19:6 ಜ್ಞಾನೋಕ್ತಿಗಳು 19:6ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
- Proverbs 5:9–14 ಜ್ಞಾನೋಕ್ತಿಗಳು 5:9–14ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ. ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು. ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು. ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
- Proverbs 9:9 ಜ್ಞಾನೋಕ್ತಿಗಳು 9:9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- Psalm 141:5 ಕೀರ್ತನೆಗಳು 141:5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Jeremiah 5:3–9 ಯೆರೆಮೀಯ 5:3–9ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ. ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು. ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ. ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ. ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು. ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ. ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.