Proverbs · chapter 13 · verse 20
Proverbs 13:20 in Kannada
ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
Jnyaanavantara jotege nadeyuvavanu jnyaaniyaagiruvanu. Buddhi heenara jotegaaranu naashavaaguvanu.
Proverbs 13:20 in English
- King James Version (KJV)
- He that walketh with wise [men] shall be wise: but a companion of fools shall be destroyed.
- World English Bible (WEB)
- One who walks with wise men grows wise, but a companion of fools suffers harm.
- American Standard Version (ASV)
- Walk with wise men, and thou shalt be wise; But the companion of fools shall smart for it.
- Bible in Basic English (BBE)
- Go with wise men and be wise: but he who keeps company with the foolish will be broken.
- Darby Translation (DBY)
- He that walketh with wise [men] becometh wise; but a companion of the foolish will be depraved.
- Webster's Bible (WBS)
- He that walketh with wise [men] shall be wise: but a companion of fools shall be destroyed.
- Young's Literal Translation (YLT)
- Whoso is walking with wise men is wise, And a companion of fools suffereth evil.
Read in context
- 18ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
- 19ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
- 20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- 21ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
- 22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
Cross references
- 1 Corinthians 15:33–34 1 ಕೊರಿಂಥದವರಿಗೆ 15:33–34ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ. ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
- Proverbs 15:31 ಜ್ಞಾನೋಕ್ತಿಗಳು 15:31ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- 2 Corinthians 6:14–18 2 ಕೊರಿಂಥದವರಿಗೆ 6:14–18ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ. ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Psalm 119:63 ಕೀರ್ತನೆಗಳು 119:63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- Proverbs 1:11–19 ಜ್ಞಾನೋಕ್ತಿಗಳು 1:11–19ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ. ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ. ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ. ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- Malachi 3:16 ಮಲಾಕಿಯ 3:16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
- Hebrews 10:24 ಇಬ್ರಿಯರಿಗೆ 10:24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
- Proverbs 7:22–23 ಜ್ಞಾನೋಕ್ತಿಗಳು 7:22–23ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- 1 Kings 12:8 1 ಅರಸುಗಳು 12:8ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
- Acts 2:42 ಅಪೊಸ್ತಲರ ಕೃತ್ಯಗಳು 2:42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.