Proverbs · chapter 14 · verse 25
Proverbs 14:25 in Kannada
ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ.
Satya saakshiyu praanagalannu tappisuttaane; mosada saakshiyu sullugalannu aadu ttaane.
Proverbs 14:25 in English
- King James Version (KJV)
- A true witness delivereth souls: but a deceitful [witness] speaketh lies.
- World English Bible (WEB)
- A truthful witness saves souls, but a false witness is deceitful.
- American Standard Version (ASV)
- A true witness delivereth souls; But he that uttereth lies [causeth] deceit.
- Bible in Basic English (BBE)
- A true witness is the saviour of lives; but he who says false things is a cause of deceit.
- Darby Translation (DBY)
- A true witness delivereth souls; but deceit uttereth lies.
- Webster's Bible (WBS)
- A true witness delivereth souls: but a deceitful [witness] speaketh lies.
- Young's Literal Translation (YLT)
- A true witness is delivering souls, And a deceitful one breatheth out lies.
Read in context
- 23ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
- 24ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.
- 25ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ.
- 26ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
- 27ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
Cross references
- Proverbs 14:5 ಜ್ಞಾನೋಕ್ತಿಗಳು 14:5ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.
- Acts 26:16–20 ಅಪೊಸ್ತಲರ ಕೃತ್ಯಗಳು 26:16–20ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ. ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
- 1 Timothy 4:1–3 1 ತಿಮೊಥೆಯನಿಗೆ 4:1–3ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- Acts 20:26–27 ಅಪೊಸ್ತಲರ ಕೃತ್ಯಗಳು 20:26–27ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು. ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- 2 Peter 3:3 2 ಪೇತ್ರನು 3:3ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
- Acts 20:21 ಅಪೊಸ್ತಲರ ಕೃತ್ಯಗಳು 20:21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.