Proverbs · chapter 14 · verse 34
Proverbs 14:34 in Kannada
ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
Neetiyu janaangavannu vruddhimaaduttade; yaava prajegaadaroo paapavu avamaanavaagide.jnyaana vulla sevakana kadege arasana daye ide; naachike padisuvavana kadege avana raudravide.
Proverbs 14:34 in English
- King James Version (KJV)
- Righteousness exalteth a nation: but sin [is] a reproach to any people.
- World English Bible (WEB)
- Righteousness exalts a nation, but sin is a disgrace to any people.
- American Standard Version (ASV)
- Righteousness exalteth a nation; But sin is a reproach to any people.
- Bible in Basic English (BBE)
- By righteousness a nation is lifted up, but sin is a cause of shame to the peoples.
- Darby Translation (DBY)
- Righteousness exalteth a nation; but sin is a reproach to peoples.
- Webster's Bible (WBS)
- Righteousness exalteth a nation: but sin [is] a reproach to any people.
- Young's Literal Translation (YLT)
- Righteousness exalteth a nation, And the goodliness of peoples [is] a sin-offering.
Read in context
- 32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- 33ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
- 34ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
- 35ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
Cross references
- Psalm 107:34 ಕೀರ್ತನೆಗಳು 107:34ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
- Deuteronomy 28:1–68 ಧರ್ಮೋಪದೇಶಕಾಂಡ 28:1–68ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು. ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ, ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ. ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ. ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ. ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು. ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು. ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು. ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು; ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು. ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ. ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು. ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು. ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು. ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ. ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ. ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು. ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು. ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ. ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ. ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು. ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ. ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು. ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು. ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು. ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು. ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Deuteronomy 29:18–28 ಧರ್ಮೋಪದೇಶಕಾಂಡ 29:18–28ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು. ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು. ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು. ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Deuteronomy 4:6–8 ಧರ್ಮೋಪದೇಶಕಾಂಡ 4:6–8ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು. ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು? ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Judges 2:6–14 ನ್ಯಾಯಸ್ಥಾಪಕರು 2:6–14ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು. ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು. ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು. ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ಹೆರೆಸ್ನಲ್ಲಿ ಹೂಣಿಟ್ಟರು. ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು. ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು. ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು. ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
- Ezekiel 16:1–63 ಯೆಹೆಜ್ಕೇಲನು 16:1–63ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು. ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ. ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು. ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ. ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು. ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ. ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ. ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ. ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ. ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ. ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ. ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ, ನೀನು ನನ್ನ ಮಕ್ಕಳನ್ನು ಕೊಂದು ಅವರಿಗೆ ಬೆಂಕಿಯನ್ನು ದಾಟುವ ಹಾಗೆ ಒಪ್ಪಿಸಿದಿಯಲ್ಲಾ; ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ. ಇದಲ್ಲದೆ ಈ ನಿನ್ನ ಎಲ್ಲಾ ಕೆಟ್ಟತನಗಳ ತರುವಾಯ ಆಗಿದ್ದೇನಂದರೆ (ಅಯ್ಯೋ! ಅಯ್ಯೋ ಎಂದು ನಿನಗೆ ದೇವರಾದ ಕರ್ತನು ಹೇಳುತ್ತಾನೆ;) ನೀನು ಪ್ರತಿಯೊಂದು ಬೀದಿಯಲ್ಲಿಯೂ ಉನ್ನತ ಸ್ಥಳಗಳನ್ನು ಕಟ್ಟಿ ನಿನಗೆ ಉತ್ತಮವಾದ ಸ್ಥಳಗ ಳನ್ನು ಮಾಡಿಕೊಂಡಿರುವಿ. ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ. ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ. ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ. ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ. ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ. ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ; ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ! ಅವರು ವ್ಯಭಿಚಾರಿಗಳಿಗೆಲ್ಲ ಬಹು ಮಾನ ಕೊಡುತ್ತಾರೆ; ಆದರೆ ನೀನು ನಿನ್ನ ಪ್ರಿಯರಿಗೆಲ್ಲ ನಿನ್ನ ಬಹುಮಾನಗಳನ್ನು ಕೊಟ್ಟು ಅವರನ್ನು ಬಾಡಿಗೆಗೆ ಪಡೆದು ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಬಹುಮಾನ ಕೊಡುತ್ತೀ. ಹೀಗಿರುವ ದರಿಂದ ಹೆಂಗಸರಿಗೆ ವಿರೋಧವಾದದ್ದು ನಿನ್ನ ವ್ಯಭಿ ಚಾರದಲ್ಲಿ ನಿನಗಾಯಿತು; ವ್ಯಭಿಚಾರಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ; ನೀನು ಬಹು ಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವದಿಲ್ಲ. ಆದದರಿಂದ ಇದು ವಿರೋಧವಾದದ್ದಾಗಿದೆ. ಆದಕಾರಣ ಓ ವ್ಯಭಿಚಾರಿಣಿಯೇ, ನೀನು ಕರ್ತನ ವಾಕ್ಯವನ್ನು ಕೇಳು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು. ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು. ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು. ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು. ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು; ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ. ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು. ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು. ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು. ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ. ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ. ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ. ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ. ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆ ಪಡು; ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ; ಅವರು ನಿನಗಿಂತ ನೀತಿವಂತರು; ಹೌದು, ನೀನು ನಿನ್ನ ಸಹೋದರಿಗಳನ್ನು ನೀತಿವಂತರೆಂದು ತೋರ್ಪಡಿಸಿ ದ್ದರಿಂದ ನೀನೇ ನಾಚಿಕೆಪಟ್ಟು ನಿನ್ನ ನಿಂದೆಯನ್ನು ಹೊತ್ತುಕೋ. ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು. ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ. ಆ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ ಕುಮಾರ್ತೆ ಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ. ನಿನ್ನ ಸಹೋದರಿಯಾದ ಸೊದೋಮ್ ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲ್ಪಡಲಿ. ಅರಾಮಿನ ಕುಮಾರ್ತೆಯರಿಂದಲೂ ಮತ್ತು ಅದರ ಸುತ್ತಲಿರುವಂತೆ ಎಲ್ಲವುಗಳಿಂದಲೂ, ನಿನ್ನನ್ನು ಉದಾ ಸೀನ ಮಾಡಿದಂತ ಎಲ್ಲಾ ಫಿಲಿಷ್ಟಿಯರ ಕುಮಾರ್ತೆಯ ರಿಂದಲೂ ನಿನಗೆ ನಿಂದೆಯು ಬಂದ ಕಾಲದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವದಕ್ಕೆ ಪೂರ್ವದಲ್ಲಿಯೇ ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ. ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು. ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ. ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Hosea 13:1 ಹೋಶೇಯ 13:1ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.
- Ezekiel 22:1–23 ಯೆಹೆಜ್ಕೇಲನು 22:1–23ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ. ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ. ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ. ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು. ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ. ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ. ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ. ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ. ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ; ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ. ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ. ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ. ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ. ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು. ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ. ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇ ನಂದರೆ -- ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವೆಲ್ಲರೂ ಕಿಟ್ಟವಾಗಿರುವದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ. ಅವರು ಬೆಳ್ಳಿ, ಹಿತ್ತಾಳೆ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒಲೆಯೊಳಗೆ ಕೂಡಿಸಿ ಅದಕ್ಕೆ ಬೆಂಕಿಯನ್ನೂದಿ ಕರಗಿಸುವರೋ ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿಯೂ ನನ್ನ ರೋಷದಲ್ಲಿಯೂ ಕರಗಿಸಿಬಿಡುವೆನು. ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ. ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ. ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
- Jeremiah 2:2–25 ಯೆರೆಮೀಯ 2:2–25ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ. ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ. ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ. ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ? ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ. ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ. ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು. ಆದದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯ ವಾಡುವೆನೆಂದು ಕರ್ತನು ಅನ್ನುತ್ತಾನೆ; ಇದಲ್ಲದೆ ನಿಮ್ಮ ಮಕ್ಕಳ ಮಕ್ಕಳ ಸಂಗಡ ವ್ಯಾಜ್ಯವಾಡುವೆನು. ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ. ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ. ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ. ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ. ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಯಾಕೆ ಸುಲಿಗೆಯಾದನು? ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ. ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ. ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ? ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ? ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ. ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ? ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ. ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ; ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು. ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.