Proverbs · chapter 15 · verse 1
Proverbs 15:1 in Kannada
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
Mruduvaada pratyuttaravu kopavannu tirugisibiduttade; teekshnavaada maatu galu kopavannu ebbisuttave.
Proverbs 15:1 in English
- King James Version (KJV)
- A soft answer turneth away wrath: but grievous words stir up anger.
- World English Bible (WEB)
- A gentle answer turns away wrath, but a harsh word stirs up anger.
- American Standard Version (ASV)
- A soft answer turneth away wrath; But a grievous word stirreth up anger.
- Bible in Basic English (BBE)
- By a soft answer wrath is turned away, but a bitter word is a cause of angry feelings.
- Darby Translation (DBY)
- A soft answer turneth away fury; but a grievous word stirreth up anger.
- Webster's Bible (WBS)
- A soft answer turneth away wrath: but grievous words stir up anger.
- Young's Literal Translation (YLT)
- A soft answer turneth back fury, And a grievous word raiseth up anger.
Read in context
- 1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- 2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- 3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
Cross references
- Proverbs 10:12 ಜ್ಞಾನೋಕ್ತಿಗಳು 10:12ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
- Proverbs 25:15 ಜ್ಞಾನೋಕ್ತಿಗಳು 25:15ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- Proverbs 29:22 ಜ್ಞಾನೋಕ್ತಿಗಳು 29:22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
- Proverbs 28:25 ಜ್ಞಾನೋಕ್ತಿಗಳು 28:25ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
- Judges 8:1–3 ನ್ಯಾಯಸ್ಥಾಪಕರು 8:1–3ಆಗ ಎಫ್ರಾಯಾಮನ ಮನುಷ್ಯರು ಅವನಿಗೆ--ನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು. ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ? ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
- 1 Samuel 25:10–13 1 ಸಮುವೇಲನು 25:10–13ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ. ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು. ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು ಈ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದರು. ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
- 1 Kings 12:13–16 1 ಅರಸುಗಳು 12:13–16ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ-- ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು. ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು. ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- Judges 12:3–6 ನ್ಯಾಯಸ್ಥಾಪಕರು 12:3–6ನೀವು ನನ್ನನ್ನು ರಕ್ಷಿಸುವದಿ ಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡುಕೊಂಡು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಹೋದೆನು; ಕರ್ತನು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ನೀವು ನನ್ನ ಸಂಗಡ ಯುದ್ಧಮಾಡುವದಕ್ಕೆ ಈಹೊತ್ತು ನನಗೆ ವಿರೋಧವಾಗಿ ಯಾಕೆ ಬಂದಿರಿ ಅಂದನು. ಆಗ ಯೆಪ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು. ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್ ಅನ್ನಬೇಕು ಅಂದರು. ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
- 1 Samuel 25:21–33 1 ಸಮುವೇಲನು 25:21–33ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ. ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು. ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ. ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು. ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ. ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ. ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ. ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು. ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು. ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ; ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು. ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ. ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.