Proverbs · chapter 15 · verse 29
Proverbs 15:29 in Kannada
ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
Kartanu dushtarige doora; neetivantara praarthaneyannu aatanu keluttaane.
Proverbs 15:29 in English
- King James Version (KJV)
- The LORD [is] far from the wicked: but he heareth the prayer of the righteous.
- World English Bible (WEB)
- The LORD is far from the wicked, but he hears the prayer of the righteous.
- American Standard Version (ASV)
- Jehovah is far from the wicked; But he heareth the prayer of the righteous.
- Bible in Basic English (BBE)
- The Lord is far from sinners, but his ear is open to the prayer of the upright.
- Darby Translation (DBY)
- Jehovah is far from the wicked; but he heareth the prayer of the righteous.
- Webster's Bible (WBS)
- The LORD [is] far from the wicked: but he heareth the prayer of the righteous.
- Young's Literal Translation (YLT)
- Far [is] Jehovah from the wicked, And the prayer of the righteous He heareth.
Read in context
- 27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
- 28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
- 29ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
- 30ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ.
- 31ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
Cross references
- John 9:31 ಯೋಹಾನನು 9:31ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
- Psalm 145:18–19 ಕೀರ್ತನೆಗಳು 145:18–19ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- 1 Peter 3:12 1 ಪೇತ್ರನು 3:12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Psalm 34:15–17 ಕೀರ್ತನೆಗಳು 34:15–17ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ. ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
- James 5:16–18 ಯಾಕೋಬನು 5:16–18ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ. ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ. ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
- Romans 8:26–27 ರೋಮಾಪುರದವರಿಗೆ 8:26–27ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ. ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- Ephesians 2:12–13 ಎಫೆಸದವರಿಗೆ 2:12–13ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
- Psalm 66:18–19 ಕೀರ್ತನೆಗಳು 66:18–19ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ. ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
- Psalm 138:6 ಕೀರ್ತನೆಗಳು 138:6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
- Isaiah 55:8–9 ಯೆಶಾಯ 55:8–9ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.