Proverbs · chapter 15 · verse 30
Proverbs 15:30 in Kannada
ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ.
Kannugala belaku hrudayavannu santoshapadisuttade; olleya vaarteyu elubu galannu pushtimaaduttade.
Proverbs 15:30 in English
- King James Version (KJV)
- The light of the eyes rejoiceth the heart: [and] a good report maketh the bones fat.
- World English Bible (WEB)
- The light of the eyes rejoices the heart. Good news gives health to the bones.
- American Standard Version (ASV)
- The light of the eyes rejoiceth the heart; [And] good tidings make the bones fat.
- Bible in Basic English (BBE)
- The light of the eyes is a joy to the heart, and good news makes the bones fat.
- Darby Translation (DBY)
- That which enlighteneth the eyes rejoiceth the heart; good tidings make the bones fat.
- Webster's Bible (WBS)
- The light of the eyes rejoiceth the heart; [and] a good report maketh the bones fat.
- Young's Literal Translation (YLT)
- The light of the eyes rejoiceth the heart, A good report maketh fat the bone.
Read in context
- 28ನೀತಿವಂತರ ಹೃದಯವು ಉತ್ತರಕೊಡುವದಕ್ಕೆ ಅಭ್ಯಾಸಿಸುತ್ತದೆ; ದುಷ್ಟರ ಬಾಯಿ ಯು ಕೆಟ್ಟವುಗಳನ್ನು ಹೊರಗೆಡವುತ್ತದೆ.
- 29ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
- 30ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ.
- 31ಜೀವದ ಗದರಿಕೆಗೆ ಕಿವಿ ಗೊಡುವವನು ಜ್ಞಾನಿಗಳ ನಡುವೆ ವಾಸವಾಗಿದ್ದಾನೆ.
- 32ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
Cross references
- Luke 2:10–19 ಲೂಕನು 2:10–19ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ. ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ. ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು. ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ-- ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು. ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು. ಅವರು ಆತನನ್ನು ನೋಡಿದ ಮೇಲೆ ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ಮಾತನ್ನು ಎಲ್ಲಾ ಕಡೆಯಲ್ಲಿಯೂ ಪ್ರಕಟಮಾಡಿದರು. ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು. ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
- Proverbs 25:25 ಜ್ಞಾನೋಕ್ತಿಗಳು 25:25ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
- Isaiah 58:11 ಯೆಶಾಯ 58:11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Revelation 22:5 ಪ್ರಕಟನೆ 22:5ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.
- Revelation 21:23 ಪ್ರಕಟನೆ 21:23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- Ezra 9:8 ಎಜ್ರನು 9:8ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
- Proverbs 17:22 ಜ್ಞಾನೋಕ್ತಿಗಳು 17:22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
- Ecclesiastes 11:7 ಪ್ರಸಂಗಿ 11:7ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
- Psalm 89:15 ಕೀರ್ತನೆಗಳು 89:15ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
- Proverbs 3:8 ಜ್ಞಾನೋಕ್ತಿಗಳು 3:8ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
- Proverbs 13:9 ಜ್ಞಾನೋಕ್ತಿಗಳು 13:9ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.