Proverbs · chapter 16 · verse 10
Proverbs 16:10 in Kannada
ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ.
Arasana tuti galalli daivokti; nyaayateerpinalli avana baayi yu doshamaaduvadilla.
Proverbs 16:10 in English
- King James Version (KJV)
- A divine sentence [is] in the lips of the king: his mouth transgresseth not in judgment.
- World English Bible (WEB)
- Inspired judgments are on the lips of the king. He shall not betray his mouth.
- American Standard Version (ASV)
- A divine sentence is in the lips of the king; His mouth shall not transgress in judgment.
- Bible in Basic English (BBE)
- Decision is in the lips of the king: his mouth will not go wrong in judging.
- Darby Translation (DBY)
- An oracle is on the lips of the king: his mouth will not err in judgment.
- Webster's Bible (WBS)
- A divine sentence [is] in the lips of the king: his mouth transgresseth not in judgment.
- Young's Literal Translation (YLT)
- An oath [is] on the lips of a king, In judgment his mouth trespasseth not.
Read in context
- 8ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
- 9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- 10ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ.
- 11ನ್ಯಾಯದ ತೂಕವೂ ತಕ್ಕಡಿಯೂ ಕರ್ತನವು; ಚೀಲದ ತೂಕಗಳು ಆತನ ಕೈಕೆಲಸವೇ.
- 12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
Cross references
- Isaiah 32:1–2 ಯೆಶಾಯ 32:1–2ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು. ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Genesis 44:15 ಆದಿಕಾಂಡ 44:15ಆಗ ಯೋಸೇಫನು ಅವರಿಗೆ--ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿ ಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ ಅಂದನು.
- Genesis 44:5 ಆದಿಕಾಂಡ 44:5ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು.
- 1 Kings 3:28 1 ಅರಸುಗಳು 3:28ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- Psalm 45:6–7 ಕೀರ್ತನೆಗಳು 45:6–7ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- 2 Samuel 23:3–4 2 ಸಮುವೇಲನು 23:3–4ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು. ಸೂರ್ಯನು ಮೂಡಿರುವಂಥ, ಪ್ರಕಾಶದಿಂದ ಮೋಡಗಳಿಲ್ಲದೆ ಇರುವಂಥ, ಉದಯ ಕಾಲದ ಬೆಳಕಿನ ಹಾಗೆಯೂ ಮಳೆ ಬಂದ ಮೇಲೆ ಭೂಮಿಯಿಂದಾಗುವ ಹುಲ್ಲಿನ ಹಾಗೆಯೂ ಇರು ವನು.
- Psalm 72:1–4 ಕೀರ್ತನೆಗಳು 72:1–4ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು. ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು. ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು. ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Hosea 10:4 ಹೋಶೇಯ 10:4ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
- Amos 5:7 ಆಮೋಸ 5:7ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ,
- Deuteronomy 17:18–20 ಧರ್ಮೋಪದೇಶಕಾಂಡ 17:18–20ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು. ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು. ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- Proverbs 16:12–13 ಜ್ಞಾನೋಕ್ತಿಗಳು 16:12–13ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ. ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.