Proverbs · chapter 16 · verse 3
Proverbs 16:3 in Kannada
ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.
Ninna kaaryagalannu kartanige oppisidare ninna aalochanegalu sthiravaaguvavu.
Proverbs 16:3 in English
- King James Version (KJV)
- Commit thy works unto the LORD, and thy thoughts shall be established.
- World English Bible (WEB)
- Commit your deeds to the LORD, and your plans shall succeed.
- American Standard Version (ASV)
- Commit thy works unto Jehovah, And thy purposes shall be established.
- Bible in Basic English (BBE)
- Put your works into the hands of the Lord, and your purposes will be made certain.
- Darby Translation (DBY)
- Commit thy works unto Jehovah, and thy thoughts shall be established.
- Webster's Bible (WBS)
- Commit thy works to the LORD, and thy thoughts shall be established.
- Young's Literal Translation (YLT)
- Roll unto Jehovah thy works, And established are thy purposes,
Read in context
- 1ಮನುಷ್ಯನಲ್ಲಿ ಹೃದಯದ ಸಿದ್ಧತೆಗಳೂ ಬಾಯಿಯ ಪ್ರತ್ಯುತ್ತರವೂ ಕರ್ತನಿಂದಲೇ ಆಗುವವು.
- 2ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
- 3ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.
- 4ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
- 5ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
Cross references
- Psalm 37:4–5 ಕೀರ್ತನೆಗಳು 37:4–5ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು. ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
- Proverbs 3:6 ಜ್ಞಾನೋಕ್ತಿಗಳು 3:6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Psalm 55:22 ಕೀರ್ತನೆಗಳು 55:22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- 1 Peter 5:7 1 ಪೇತ್ರನು 5:7ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
- Job 22:28 ಯೋಬನು 22:28ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು.
- Job 5:8 ಯೋಬನು 5:8ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.
- Luke 12:22 ಲೂಕನು 12:22ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Matthew 6:25–34 ಮತ್ತಾಯನು 6:25–34ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ? ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ? ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ. ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ. ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ? ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ. ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು. ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Isaiah 7:5–7 ಯೆಶಾಯ 7:5–7ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.