Proverbs · chapter 16 · verse 31
Proverbs 16:31 in Kannada
ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
Neetiya maargadalli kaanisalpattare naretaleyu sundara kireetavaagive.
Proverbs 16:31 in English
- King James Version (KJV)
- The hoary head [is] a crown of glory, [if] it be found in the way of righteousness.
- World English Bible (WEB)
- Gray hair is a crown of glory. It is attained by a life of righteousness.
- American Standard Version (ASV)
- The hoary head is a crown of glory; It shall be found in the way of righteousness.
- Bible in Basic English (BBE)
- The grey head is a crown of glory, if it is seen in the way of righteousness.
- Darby Translation (DBY)
- The hoary head is a crown of glory, [if] it is found in the way of righteousness.
- Webster's Bible (WBS)
- The hoary head [is] a crown of glory, [if] it is found in the way of righteousness.
- Young's Literal Translation (YLT)
- A crown of beauty [are] grey hairs, In the way of righteousness it is found.
Read in context
- 29ಬಲಾತ್ಕಾರಿಯು ನೆರೆಯವನನ್ನು ಮರುಳು ಗೊಳಿಸಿ ದುರ್ಮಾರ್ಗಕ್ಕೆ ನಡಿಸುತ್ತಾನೆ.
- 30ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
- 31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- 32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠನು, ತನ್ನ ಮನಸ್ಸನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- 33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
Cross references
- Proverbs 20:29 ಜ್ಞಾನೋಕ್ತಿಗಳು 20:29ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
- Leviticus 19:32 ಯಾಜಕಕಾಂಡ 19:32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- Proverbs 3:1–2 ಜ್ಞಾನೋಕ್ತಿಗಳು 3:1–2ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ: ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
- Proverbs 17:6 ಜ್ಞಾನೋಕ್ತಿಗಳು 17:6ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
- 1 Samuel 12:2–5 1 ಸಮುವೇಲನು 12:2–5ಇಗೋ, ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ಈಗ ನಾನು ತಲೆನರೆತ ಮುದುಕನಾಗಿದ್ದೇನೆ. ಇಗೋ, ನನ್ನ ಕುಮಾರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯದಿಂದ ಈ ದಿನದ ವರೆಗೂ ನಿಮ್ಮ ಮುಂದೆ ನಡಕೊಂಡಿದ್ದೇನೆ. ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು. ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು. ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- Philemon 1:9 ಫಿಲೆಮೋನನಿಗೆ 1:9ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
- Ecclesiastes 4:13 ಪ್ರಸಂಗಿ 4:13ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.
- Luke 2:29–38 ಲೂಕನು 2:29–38ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ; ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು. ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ. ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು. ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು. ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು. ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು. ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು. ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು. ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
- Genesis 47:7–10 ಆದಿಕಾಂಡ 47:7–10ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು. ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು. ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
- Job 32:6–7 ಯೋಬನು 32:6–7ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು. ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
- 1 Chronicles 29:10–25 1 ಪೂರ್ವಕಾಲವೃತ್ತಾಂತ 29:10–25ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ. ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು. ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ. ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು. ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು. ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು. ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು. ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು. ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು. ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು. ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು. ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು. ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು.